More

    ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ

    ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಆರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ. ಕಾಯಂ ನೌಕರರು, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ. ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶ ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವ ಕುಟುಂಬಗಳು, ನಾಲ್ಕು ಚಕ್ರದ ವಾಹನ ಹೊಂದಿರುವ (ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬಗಳನ್ನು ಹೊರತುಪಡಿಸಿ) ಎಲ್ಲ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತಲೂ ಹೆಚ್ಚಿರುವ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇ ಕೆವೈಸಿ ಮಾಡಿಕೊಳ್ಳಲು ಮತ್ತೊಮ್ಮೆ ಅವಕಾಶ
    ಜಿಲ್ಲೆಯ ಅಂತ್ಯೋದಯ (ಎಎವೈ) ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿದ್ದು, ಈವರೆಗೆ ಇ- ಕೆವೈಸಿ ಆಗದೆ ಇರುವ ಸದಸ್ಯರಿಗೆ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಾಂಶದಲ್ಲಿ ಬಯೋ ದೃಢೀಕರಣ ನೀಡಿ, ಇ ಕೆವೈಸಿ ಮಾಡಲು ಪ್ರತಿ ತಿಂಗಳ 1 ರಿಂದ 10ರ ವರೆಗೆ ತಂತ್ರಾಂಶದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ. ಸ್ಥಳೀಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣದ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts