ಮೇ 6ರಿಂದ ಕಾಟುಕುಕ್ಕೆ ದೇವಳ ಬ್ರಹ್ಮಕಲಶೋತ್ಸವ

Published on

ಕಾಸರಗೋಡು: ಎಣ್ಮಕಜೆಯ ಚೌಗ್ರಾಮ ದೇವಾಲಯವೆಂದೇ ಖ್ಯಾತಿ ಪಡೆದಿರುವ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮೇ 6ರಿಂದ 12ರವರೆಗೆ ಜರುಗಲಿದೆ.

ಕೀಕಾಂಗೋಡು ನೀಲೇಶ್ವರದ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಗೌರವಾಧ್ಯಕ್ಷ ಹಾಗೂ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮತ್ತು ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಗೌರವ ಮಾರ್ಗದರ್ಶಿಗಳಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

6ರಂದು ಬೆಳಗ್ಗೆ 10.30ಕ್ಕೆ ಪೆರ್ಲ ಶ್ರೀ ಸತ್ಯನಾರಾಯಣ ಭಜನಾ ಮಂದಿರ ವಠಾರದಿಂದ ಹಸಿರುವಾಣಿ ಸಮರ್ಪಣೆಗೊಳ್ಳಲಿದೆ. ಮಾಣಿಲ ಶ್ರೀ ಮೋಹನದಸ ಸ್ವಾಮೀಜಿ ಹಸಿರುವಾಣಿ ಮೆರವಣಿಗೆಗೆ ಚಾಲನೆ ನೀಡುವರು. ನಂತರ ಉಗ್ರಾಣ ಮುಹೂರ್ತ ನಡೆಯುವುದು. ಸಂಜೆ 6ಕ್ಕೆ ತಂತ್ರಿವರ್ಯರಿಗೆ ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ವಿವಿಧ ವೈದಿಕ ಕಾರ್ಯಕ್ರಮ ನಡೆಯುವುದು. ರಾತ್ರಿ 7.30ಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುವುದು. ಈ ಸಂದರ್ಭ ನೂತನ ಸೇವಾ ಕೊಠಡಿಗಳನ್ನು ಮಲಬಾರ್ ದೇವಸ್ವಂ ಆಯುಕ್ತ ಟಿ.ಸಿ.ಬಿಜು ಉದ್ಘಾಟಿಸುವರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ ಎಣ್ಮಕಜೆ ಅಧ್ಯಕ್ಷತೆ ವಹಿಸುವರು.

ಭಜನಾ ಸಂಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮ, 8ರಂದು ಬೆಳಗ್ಗೆ 7ರಿಂದ ಗಣಪತಿ ಹವನ, ವಿವಿಧ ವೈದಿಕ ಕಾರ್ಯಕ್ರಮ, ಭಜನಾ ಸಂಕೀರ್ತನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 9ರಂದು ಸಂಜೆ 5ಕ್ಕೆ ನವಾವರಣ ಕೀರ್ತನೆ, ಅಷ್ಟಾವಧಾನ ಸೇವೆ ಸಹಿತ ಶ್ರೀಚಕ್ರಪೂಜೆ, 11ರಂದು ಬೆಳಗ್ಗೆ 7ಕ್ಕೆ ಗಣಪತಿ ಹವನ, 8.26ರಿಂದ ಅಷ್ಟಬಂಧ ಲೇಪನ, ಪರಿಕಲಶಾಭಿಷೇಕ, ಮಧ್ಯಾಹ್ನ 12ಕ್ಕೆ ಬ್ರಹ್ಮಕಲಶಾಭಿಷೇಕ ಜರುಗಲಿದೆ. ಮಧ್ಯಾಹ್ನ 2ಗಂಟೆಗೆ ಧಾರ್ಮಿಕ ಸಭೆಯಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹಾಗೂ ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡುವರು. ರಾತ್ರಿ 7ಕ್ಕೆ ಶ್ರೀರಂಗ ಪೂಜೆ, ದೇವರ ಬಲಿ, ಭೂತ ಬಲಿ, ಪಲ್ಲಕ್ಕಿ ಉತ್ಸವ, ಚಂದ್ರಮಂಡಲ ರಥೋತ್ಸವ, ದರ್ಶನಬಲಿ, ಬಟ್ಟಲು ಕಾಣಿಕೆ ನೆರವೇರಲಿದೆ. 12ರಂದು ಬೆಳಗ್ಗೆ 7.50ಕ್ಕೆ ಉಷಾಃಪೂಜೆ, ಭಂಡಾರ ಇಳಿಸುವುದು, 10ಕ್ಕೆ ಪಿಲಿಭೂತದ ನೇಮ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net