ಬ್ರಹ್ಮಗಂಟು ಖ್ಯಾತಿಯ ನಟಿ Shobitha Shivanna ಆತ್ಮಹತ್ಯೆ..!

Shobitha Shivanna
Published on

ಬೆಂಗಳೂರು: ಬ್ರಹ್ಮಗಂಟು ಧಾರವಾಹಿ ಮೂಲಕ ಖ್ಯಾತಿ ಪಡೆದಿದ್ದ ನಟಿ ಶೋಭಿತಾ ಶಿವಣ್ಣ (Shobitha Shivanna) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ಮೂಲದ ನಟಿ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬ್ರಹ್ಮಗಂಟು, ನಿನ್ನಿಂದಲೇ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಿತಾ ಎರಡೊಂದ್ಲಾ ಮೂರು.., ಎಟಿಎಮ್ , ಒಂದ್ ‌ಕಥೆ ಹೇಳ್ಲಾ ಸಿನಿಮಾದಲ್ಲಿ ಕೂಡ ನಟಿಸಿದ್ದರು.

2023ರ ಮೇ ತಿಂಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಟಿ ಆ ಬಳಿಕ ಸಿನಿಮಾ ಹಾಗೂ ಧಾರಾವಾಹಿಗಳಿಂದ ಅಂತರ ಕಾಯ್ದುಕೊಂಡಿದ್ದರು. ನಟಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವೆಂಬರ್​ 30ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ.

Shobitha Shivanna
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net