More

    ಬೇಂಗೂರು ಗ್ರಾಮದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನ

    ಕೊಡಗು : ನಾಪೋಕ್ಲು ಸಮೀಪದ ಚೇರಂಬಾಣೆ ಗ್ರಾಮ ಪಂಚಾಯತಿಯ ಬೇಂಗೂರು ಗ್ರಾಮದ ಶ್ರೀ ನಾಡು ಕಡಪಾಲಪ್ಪ ದೇವಾಲಯದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಇತ್ತೀಚೆಗೆ ಸಂಪನ್ನಗೊಂಡಿತು.


    ದ್ವಾದಶ ನಾಳಿಕೇರ ಗಣಯಾಗ, ನವಗ್ರಹ ಯಾಗ, ರಕ್ಷಾ ಕಲಶ ಪ್ರತಿಷ್ಠಾಪನೆ, ಬಿಂಬಶುದ್ಧಿ, ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾಪನೆ, ಜೀವಕುಂಭಾಭಿಷೇಕ, ಮಹಾ ಗಣಪತಿ ದೇವರ ಪ್ರತಿಷ್ಠಾಪನೆ, ಶಾಂತಿ ಪೂಜೆ, ಪ್ರಾಯಶ್ಚಿತ ಹೋಮ, ಆಶ್ಲೇಷಬಲಿ, ತತ್ವ ಹೋಮ, ಬ್ರಹ್ಮ ಕಲಶ, ಮಂಡಲ ಪೂಜೆ, ಕಡಪಾಲಪ್ಪ ದೇವರಿಗೆ ಶಾಂತಿ ಪ್ರಾಯಶ್ಚಿತ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.


    ವಿಶೇಷ ಅಲಂಕಾರ, ಮಹಾಪೂಜೆ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ನಂತರ ದೇವರ ಪ್ರದರ್ಶನ ನೃತ್ಯಬಲಿ ನಡೆಯಿತು. ಕೊಳಲು ವಾದನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.


    ಸಪರಿವಾರ ಸಹಿತ ಕಡಪಾಲಪ್ಪ ದೇವರ ಪುನರ್ ಪ್ರತಿಷ್ಠಾಪನ್ಮೆ ಕಲಶೋತ್ಸವವನ್ನು ಉಡುಪಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ನೆರವೇರಿಸಿದರು. ಅರ್ಚಕ ರಾಧಾಕೃಷ್ಣ ಭಟ್ಟ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಕಳತೂರು ವೇದಮೂರ್ತಿ, ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.


    ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ತೇಲಪಂಡ ನಂದ ಮಂದಣ್ಣ, ಉಪಾಧ್ಯಕ್ಷ ಕುಂಚೆಟ್ಟಿರ ಸುಬ್ಬಯ್ಯ, ಕಾರ್ಯದರ್ಶಿ ಕುಂಚೆಟ್ಟಿರ ಗೋಪಾಲ, ಖಜಾಂಚಿ ಪಟ್ಟ ಮಾಡ ಅಶೋಕ್, ಸದಸ್ಯರಾದ ಕಲ್ಲು ಮಾಡಂಡ ವಾಸು, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನಣ್ಣ, ಕಲ್ಲು ಮಾಡಂಡ ಅಶೋಕ್, ಕುಂಚೆಟ್ಟಿರ ರಮೇಶ್, ಚೋಕಿರ ಪೊನ್ನನ್ನ, ಕೀಪಾಡಂಡ ವಾಸು, ಬೊಳ್ಳಾಪರ್ಂಡ ಚಂಗಪ್ಪ ತಕ್ಕಮುಖ್ಯಸ್ಥರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts