

ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ವ್ಯಾಪ್ತಿಯಲ್ಲಿ ಬರುವ 2024-25ನೇ ಸಾಲಿನಲ್ಲಿ ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಡಿಪ್ಲೋಮಾ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಕಚೇರಿ ಸೇವಾ ಕೌಂಟರ್‌ನಲ್ಲಿ ಅರ್ಜಿ ಪಡೆದು ಸಂಬಂಧಿಸಿದ ದಾಖಲೆಗಳಾದ ಕಳೆದ ವಾರ್ಷಿಕ ಪರೀಕ್ಷೆ ಅಂಕಪಟ್ಟಿ ಮತ್ತು ಪಡಿತರ ಚೀಟಿ ನಕಲು ಪ್ರತಿಯೊಂದಿಗೆ ಆಗಸ್ಟ್ 25ರ ಒಳಗಾಗಿ ದೇವಸ್ಥಾನ ಕಚೇರಿಗೆ ಸಲ್ಲಿಸುವಂತೆ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ಅಧ್ಯಕ್ಷ ಎಂ.ಶಿವರಾಮ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ 9449264195ನ್ನು ಸಂಪರ್ಕಿಸಬಹುದು.