More

    ಬ್ರಹ್ಮರಕೂಟ್ಲು ಟೋಲ್ ರದ್ದು ಆಗ್ರಹ

    ಬಂಟ್ವಾಳ: ಅವಧಿ ಮೀರಿದ ಮತ್ತು ಅವೈಜ್ಞಾನಿಕ ಟೋಲ್ ಸಂಗ್ರಹ ರದ್ದುಗೊಳಿಸುವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬಂಟ್ವಾಳ ನೇತೃತ್ವದಲ್ಲಿ ಸಾರ್ವಜನಿಕ ಬೃಹತ್ ಪ್ರತಿಭಟನೆ ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆಯಿತು.
    ಪ್ರತಿಭಟನಕಾರರನ್ನು ಉದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಬ್ರಹ್ಮರಕೂಟ್ಲು ಟೋಲ್‌ಗೇಟ್‌ನಲ್ಲಿ ಸಮಸ್ಯೆ ಸೃಷ್ಟಿಯಾಗಿದೆ. ಇದೊಂದು ಅಪಾಯಕಾರಿ ಟೋಲ್ ಆಗಿ ಪರಿಣಮಿಸುತ್ತಿದೆ. ಇಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಚುನಾಯಿತ ಪ್ರತಿನಿಧಿಗಳು ಗಮನ ಹರಿಸಬೇಕು ಎಂದರು.

    ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಮಾತನಾಡಿ, ಗಣತಿಯಂತೆ ದೇಶಾದ್ಯಂತ 279 ಮಿಲಿಯನ್ ವಾಹನಗಳು ಒಡಾಟ ನಡೆಸುತ್ತಿದ್ದು, ರಸ್ತೆ ನಿರ್ವಹಣೆ ವೆಚ್ಚ ಎಂದು ಪ್ರತೀ ಲೀಟರ್ ಪೆಟ್ರೋಲ್,ಡೀಸೆಲ್‌ನಿಂದ 7 ರೂಪಾಯಿ ಪಡೆಯುತ್ತಾರೆ. ಒಂದೆಡೆ ತೆರಿಗೆ, ಇನ್ನೊಂದೆಡೆ ವಿಮೆ ಪಾವತಿ ಮಾಡುತ್ತೇವೆ. ಅದರ ಜತೆಗೆ ಟೋಲ್ ಸುಂಕ ಪಡೆದು ಜನರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
    ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿದರು.ವರ್ತಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಗ್ಯಾರೇಜು ಮಾಲೀಕರ ಸಂಘದ ಅಧ್ಯಕ್ಷ ಅಣ್ಣು ಪೂಜಾರಿ, ವಕೀಲ ಉಮೇಶ್ ಕುಮಾರ್ ವೈ, ತುಂಬೆ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲುಕ್‌ಮನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಪ್ರಮುಖರಾದ ಪ್ರಕಾಶ್ ಶೆಟ್ಟಿ, ರಾಮಣ್ಣ ವಿಟ್ಲ, ಶೇಖರ್ ಬಿ., ಪ್ರೇಮನಾಥ್ ಕೆ., ಸುರೇಶ್ ಬಿ ರಾಜಾ ಚೆಂಡ್ತಿಮಾರ್, ಚಿತ್ತರಂಜನ್ ಬೊಂಡಾಲ, ಹಾರೂನ್ ರಶೀದ್, ವಾಸುಪೂಜಾರಿ, ಮಹಮ್ಮದ್ ನಂದಾವರ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    ವಕೀಲರ ಸಂಘ ಬಂಟ್ವಾಳ, ಗ್ಯಾರೇಜು ಮಾಲೀಕರ ಸಂಘ ಬಂಟ್ವಾಳ, ವರ್ತಕರ ಸಂಘ ಬಂಟ್ವಾಳ, ದಕ ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ ಮಾಲೀಕರ ಸಂಘ ಬಂಟ್ವಾಳ, ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಚಾಲಕರ ಸಂಘ ಬಂಟ್ವಾಳ ಸಹಿತ ನ್ಯಾಯಪರ ಹೋರಾಡುವ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts