ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Narayana-guru-Jayanti
Published on

ಕಾರವಾರ: ಬ್ರಹ್ಮಶ್ರೀ ನಾರಾಯಣ ಗುರುಗಳು ಬೋಧಿಸಿದ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉತ್ತರ ಕನ್ನಡ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ಉಪಾಧ್ಯಕ್ಷ ಸುನೀಲ ಸೋನಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.
ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸಿ ಅಖಂಡ ಭಾರತವನ್ನು ನಿರ್ಮಿಸೋಣ ಎಂದರು. ಉತ್ತರ ಕನ್ನಡ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಮಾದೇವ ನಾಯ್ಕ ಮತನಾಡಿ, ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ತಳಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಾಮಾ ನಾಯ್ಕ ಮಾತನಾಡಿ, ನಾರಾಯಣ ಗುರುಗಳು ಒಂದೇ ಜಾತಿಗೆ, ಸಿಮೀತರಾದವರಲ್ಲ ಇಡೀ ಜಗತ್ತಿನ ಗುರುಗಳು ಆದರಿಂದ ಎಲ್ಲ ಸಮುದಾಯದವರು ಒಗ್ಗೂಡಿ ಗುರುಗಳ ಜಯಂತಿ ಆಚರಿಸಬೇಕು ಎಂದರು.
ಕುಮಟಾ ಬಾಳಿಗಾ ಕಾಲೇಜ್ ಉಪನ್ಯಾಸಕ ಎಂ.ಜಿ. ನಾಯ್ಕ ಬ್ರಹ್ಮಶ್ರೀ ನಾರಾಯಣಗುರು ಅವರ ಕುರಿತು ಉಪನ್ಯಾಸ ನೀಡಿದರು. ಕಾರವಾರ ಡಿವೈಎಸ್‌ಪಿ ಗಿರೀಶ್ ಎಸ್.ವಿ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ, ನಿವೃತ್ತ ಸರ್ಕಾರಿ ಅಧಿಕಾರಿ ಎನ್.ಜಿ. ನಾಯ್ಕ, ಪ.ಜಾತಿ ಮತ್ತು ಪ.ಪಂಗಡ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಜೆ. ಮನೋಜ್ ಇದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net