More

    ಮಧ್ಯವರ್ತಿಗಳ ಹಾವಳಿಗೆ ಬ್ರೇಕ್

    ಬಳ್ಳಾರಿ : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2023-24ನೇ ಸಾಲಿನಲ್ಲಿ ಭತ್ತ, ರಾಗಿ, ಜೋಳ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿಸಲು ಡಿ.1ರಿಂದ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಲಾಗುತ್ತಿದೆ. ಮಧ್ಯವರ್ತಿಗಳು, ಏಜೆಂಟರ್‌ಗಳು ಖರೀದಿ ಕೇಂದ್ರಗಳಿಗೆ ಭತ್ತವನ್ನು ತಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

    ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರುವ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಹಣ ಪಾವತಿಸಲಾಗುವುದು. ರೈತರ ನೋಂದಣಿ ಪ್ರಕ್ರಿಯೆಯು ರಾಗಿ ಮತ್ತು ಜೋಳ ಬೆಳೆಗಳಿಗೆ ಡಿ.1ರಿಂದ ನಡೆಯಲಿದ್ದು, ಭತ್ತ ಬೆಳೆಗೆ ಈಗಾಗಲೇ ಆರಂಭವಾಗಿದೆ ಹಾಗೂ ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆಯು 2024ನೇ ಜನವರಿ 1ರಿಂದ 2024ನೇ ಮಾ.31ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

    ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆಯಾ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಭತ್ತ, ರಾಗಿ, ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಬೆಳೆಗಳ ಖರೀದಿ ಮಿತಿ
    ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಟ 40 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ಜೋಳವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಎಲ್ಲ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು. ರಾಗಿಯನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ನಂತೆ ಎಲ್ಲ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts