ಬೈಂದೂರು: ಮಗುವಿನ ಜನನದ ಕೆಲವು ಗಂಟೆಗಳು ಗೊಲ್ಡನ್ ಅವರ್ ಆಗಿದ್ದು ಈ ವೇಳೆ ತಾಯಂದಿರು ಸ್ತನಪಾನ ಮಾಡುವುದು ಬಹಳ ಮುಖ್ಯ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವೈದ್ಯೆ, ಮಕ್ಕಳ ತಜ್ಞೆ ಡಾ.ನಂದಿನಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ನೇತೃತ್ವದಲ್ಲಿ ರೋಟರಿ ಕ್ಲಬ್ ಬೈಂದೂರು, ಇನ್ನರ್‌ವೀಲ್ ಕ್ಲಬ್ ಬೈಂದೂರು ಸಹಯೋಗದೊಂದಿಗೆ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಗುವಿನ ಜನನದ ದಿನದಿಂದ ನಿಯಮಿತವಾಗಿ ಸ್ತನಪಾನ ಮಾಡುವುದರಿಂದ ತಾಯಿಯೊಂದಿಗೆ ಮಗುವಿನ ಬಾಂಧವ್ಯ ವೃದ್ಧಿಯ ಜತೆಗೆ ಆರೋಗ್ಯವೂ ವೃದ್ಧಿಯಾಗುತ್ತದೆ ಎಂದರು.
ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಐ.ನಾರಾಯಣ್, ಇನ್ನರ್‌ವೀಲ್ ಅಧ್ಯಕ್ಷೆ ಗುಲಾಬಿ ಮರವಂತೆ, ಬೈಂದೂರು ರೋಟರಿ ಕಾರ್ಯದರ್ಶಿ ಸುನೀಲ್ ಎಚ್.ಜಿ., ಇನ್ನರ್‌ವೀಲ್ ಕಾರ್ಯದರ್ಶಿ ಚೈತ್ರಾ ಯಡ್ತರೆ ಉಪಸ್ಥಿತರಿದ್ದರು.