More

    ಮದುವೆ ಮನೆಯ ಡಿಜೆ ನಿಲ್ಲಿಸಿದ ಪೊಲೀಸ್​; ಠಾಣೆ ಎದುರು ಪ್ರತಿಭಟನೆ ಕುಳಿತ ಜೋಡಿ!

    ಮಧ್ಯಪ್ರದೇಶ: ಮದುವೆಯಲ್ಲಿ ಡಿಜೆ ಸಂಗೀತ ನುಡಿಸುವುದನ್ನು ಪೊಲೀಸರು ತಡೆದಿದ್ದಾರೆ. ಈ ವಿಚಾರವಾಗಿ ಬೇಸರಗೊಂಡ ನವ ದಂಪತಿ ರತ್ಲಾಮ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ.

    ಪೊಲೀಸ್ ಠಾಣೆಯಲ್ಲಿ ವಧು-ವರರು ಪ್ರತಿಭಟನೆಗೆ ಕುಳಿತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಇಬ್ಬರು ಪೊಲೀಸರು ಮದುವೆ ಸ್ಥಳಕ್ಕೆ ಆಗಮಿಸಿ ಸಂಗೀತ ನುಡಿಸುವುದನ್ನು ನಿಲ್ಲಿಸುವಂತೆ ಡಿಜೆಗೆ ಕೇಳಿದರು.
    ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಥಳದಲ್ಲಿ ಪೊಲೀಸರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ಎಂದು ದಂಪತಿ ಆರೋಪಿಸಿದ್ದಾರೆ. ತಮ್ಮ ಕುಟುಂಬ ಸದಸ್ಯರೊಂದಿಗೆ ಪೊಲೀಸ್ ಠಾಣೆಗೆ ಎದುರು ಸುಮಾರು ಮೂರು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ.

    ಇದನ್ನೂ ಓದಿ: ಕುಡಿದು ಕಿರುಕುಳ ನೀಡುವ ಪತಿಯನ್ನು ದೋಸೆ ಕಾವಲಿ ಹೊಡೆದು ಕೊಂದ ಪತ್ನಿ!
    ಸುದ್ದಿಗಾರರೊಂದಿಗೆ ಮಾತನಾಡಿದ ವರ ಅಜಯ್ ಸೋಲಂಕಿ, ಪೊಲೀಸರು ತಮ್ಮ ಕುಟುಂಬದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಅವರ ಮದುವೆಯನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು.

    ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ದಂಪತಿ ಆರಂಭದಲ್ಲಿ ಮದುವೆಗೆ ನಿರಾಕರಿಸಿದ್ದರು. ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ವಧು-ವರರು ಮದುವೆ ಸ್ಥಳಕ್ಕೆ ಮರಳಿದರು.

    ನಟಿ ‘ಖುಷ್ಬೂ’ ಆರೋಗ್ಯದಲ್ಲಿ ಏರುಪೇರು..ಆಸ್ಪತ್ರೆಗೆ ದಾಖಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts