More

    ಸೇತುವೆ ಮುಳುಗಿ ಸಂಚಾರ ಕಡಿತ

    ಬೆಳಗಾವಿ: ನಗರವೂ ಸೇರಿ ಜಿಲ್ಲೆಯ ಹಲವೆಡೆ ಭಾನುವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆ ಹಲವು ಅವಾಂತರ ಸೃಷ್ಟಿಸಿದೆ. ತುಪ್ಪರಿ ಹಳ್ಳ ತುಂಬಿ ಹರಿದ ಪರಿಣಾಮ ಸವದತ್ತಿ ತಾಲೂಕಿನ ಇನಾಮಹೊಂಗಲ ಬಳಿ ಇರುವ ಸೇತುವೆ ಮುಳುಗಡೆಯಾಗಿದ್ದು, ಸವದತ್ತಿ-ಧಾರವಾಡ ಮಾರ್ಗದ ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿದೆ.

    ಇಡೀ ರಾತ್ರಿ ಸುರಿದ ಜೋರು ಮಳೆಗೆ ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ. ಪಟ್ಟಣದ ಬಡಾವಣೆಗಳ ತಗ್ಗು-ಗುಂಡಿಗಳೆಲ್ಲ ತುಂಬಿ ಹರಿದವು. ಮಳೆಯ ಅಬ್ಬರಕ್ಕೆ ರಸ್ತೆಗಳಲ್ಲಿ ನೀರು ರಭಸವಾಗಿ ಹರಿಯಿತು. ಸುಮಾರು ಗಂಟೆಗಳ ಕಾಲ ಸುರಿದ ಮಳೆಗೆ ಲಂಡೇನ ಹಳ್ಳವು ತುಂಬಿ ರಸ್ತೆಯ ಮೇಲೆ ನೀರು ರಭಸವಾಗಿ ಹರಿಯಿತು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿ ಗೃಹಗಳಿಗೆ ನೀರು ನುಗ್ಗಿದೆ. ಸಿಬ್ಬಂದಿ ನೀರು ಹೊರಹಾಕಲು ಪ್ರಯಾಸಪಟ್ಟರು.

    ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ ಮಾತನಾಡಿ, ತುಪ್ಪರಿ ಹಳ್ಳ ಸೇತುವೆ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಸವದತ್ತಿ- ಧಾರವಾಡ ರಸ್ತೆ ಸಂಪರ್ಕಕ್ಕೆ ಪರಿಹಾರ ದೊರೆಯಲಿದೆ. ಸ್ಥಳಕ್ಕೆ ಬರ ವೀಕ್ಷಣೆ ತಂಡ ಭೇಟಿ ನೀಡಿ ಪರಿಶೀಲಿಸಲಿದ್ದು, ಹಳ್ಳದ ಹೂಳೆತ್ತುವ ಕಾಮಗಾರಿಯನ್ನು ಆದಷ್ಟು ಬೇಗ ಪ್ರಾರಂಭಿಸಲಾಗುವುದು. ರೈತರ ಜಮೀನುಗಳಿಗೆ ನೀರು ನುಗ್ಗದಂತೆ ರಕ್ಷಣಾ ಗೋಡೆ ನಿರ್ಮಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts