More

    ಲೋಕ ಸಮರ: ತೆಲಂಗಾಣದಲ್ಲಿ ಬಿಆರ್​ಎಸ್​-ಬಿಎಸ್​ಪಿ ಮೈತ್ರಿ ಫಿಕ್ಸ್​!

    ತೆಲಂಗಾಣ: ಮುಂಬರುವ ಲೋಕಸಭೆ ಚುನಾವಣೆಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತೆಲಂಗಾಣದಲ್ಲಿ ಮೈತ್ರಿ ಮಾಡಿಕೊಂಡಿರುವುದಾಗಿ ಬಿಆರ್‌ಎಸ್ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅಧಿಕೃತವಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ: ಐಪಿಎಲ್ ಆರಂಭಕ್ಕೂ ಮುನ್ನ ದೆಹಲಿ ಕ್ಯಾಪಿಟಲ್ಸ್​ಗೆ ಅಘಾತ: ಲುಂಗಿ ಎನ್‌ಗಿಡಿ ಔಟ್, ಬದಲಿಗೆ ಅಸೀಸ್​ ಆಟಗಾರ ಎಂಟ್ರಿ!

    ಹೈದರಾಬಾದ್​ನಲ್ಲಿರುವ ಕೆಸಿಆರ್​ ಅವರ ನಂದಿನಗರದ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್‌ಎಸ್ ಪ್ರವೀಣ್ ಕುಮಾರ್ ನಡುವೆ ನಡೆದ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಅಂತಿಮವಾಗಿ ಮೈತ್ರಿಯಾಗುವುದಾಗಿ ಘೋಷಿಸಿದರು.

    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್ ಟಿಕೆಟ್‌ನಿಂದ ಸ್ಪರ್ಧಿಸಲು ಹೆಚ್ಚಿನವರು ಉತ್ಸುಕರಾಗಿಲ್ಲ ಎಂಬುದು ಗಮನಾರ್ಹ. ಒಬ್ಬ ಹಾಲಿ ಸಂಸದ ಮತ್ತು ಇನ್ನೊಬ್ಬರು ನಾಯಕರು ಎರಡು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಪಕ್ಷದ ಪ್ರಸ್ತಾಪವನ್ನು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದಾರೆ.

    ಮೂಲಗಳ ಪ್ರಕಾರ, ನಾಗರ್‌ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್‌ಪಿಗೆ ನೀಡುವುದಾಗಿ ಬಿಆರ್‌ಎಸ್ ಮುಖ್ಯಸ್ಥ ಕೆಸಿಆರ್ ಘೋಷಿಸಿದ್ದಾರೆ. ತೆಲಂಗಾಣದಲ್ಲಿ ಒಟ್ಟು 17 ಲೋಕಸಭಾ ಕ್ಷೇತ್ರಗಳಿವೆ. ಬಿಆರ್​ಎಸ್​ ಈಗಾಗಲೇ 11 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

    ಇನ್ನು ಪೇಟಿಎಂ ಫಾಸ್​ಟ್ಯಾಗ್ ಸ್ಥಗಿತ! ಮುಂದೆ ಏನು ಮಾಡಬೇಕು, ಇಲ್ಲಿದೆ ನೋಡಿ ಮಾಹಿತಿ ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts