More

    ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ, ಆಸ್ಪತ್ರೆ ಮುಂದೆ ಪ್ರತಿಭಟನೆ

    ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (ಬಿಆರ್‌ಎಸ್) ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

    ಗುರುವಾರ ಹೆರಿಗೆಗೆ ಕುಂದಾಪುರದ ಉಷಾ (26) ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಿ ಮಗುವನ್ನು ಹೊರ ತೆಗೆಯಲಾಗಿದೆ. ಈ ವೇಳೆ ತಾಯಿಯ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಮಣಿಪಾಲಕ್ಕೆ ಸ್ಥಳಾಂತರಿಸಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ನಾಗಭೂಷಣ್ ಉಡುಪ, ಜಿಲ್ಲಾ ಸರ್ಜನ್ ಮಧುಸೂದನ್ ನಾಯಕ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts