

ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ವಶದಲ್ಲಿರುವ ಬಿಆರ್ಎಸ್ ನಾಯಕಿ ಕೆ. ಕವಿತಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಡಿಡಿಯು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾ ತಿಹಾರ್ ಜೈಲಿನಲ್ಲಿದ್ದಾರೆ. ಅವರನ್ನು ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕವಿತಾ ಅವರನ್ನು ಈ ವರ್ಷ ಮಾರ್ಚ್ 15 ರಂದು ಬಂಧಿಸಲಾಗಿತ್ತು. ಇದಾದ ಒಂದು ವಾರದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅನುಕೂಲಕರ ಮದ್ಯ ನೀತಿಯನ್ನು ರೂಪಿಸಿದ್ದಕ್ಕಾಗಿ ಎಎಪಿಗೆ ₹100 ಕೋಟಿ ಮೊತ್ತದ ಕಿಕ್ಬ್ಯಾಕ್ ನೀಡಿದ ಗುಂಪಿನ ಭಾಗವಾಗಿ ಕೆ ಕವಿತಾ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಕೂಡ ಜೈಲಿನಲ್ಲಿದ್ದಾರೆ.