ನವದೆಹಲಿ: 2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ ನಾಯಕಿ, ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ. ಕವಿತಾ ಕೇಂದ್ರಿಯಾ ತನಿಖಾ ದಳ (CBI) ನೋಟಿಸ್ ಜಾರಿ ಮಾಡಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಕವಿತಾಗೆ ಎರಡನೇ ಭಾರಿಗೆ ಸಮನ್ಸ್ ಜಾರಿ ಮಾಡಿದ್ದು, ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಹಿಂದೆ 2023ರ ಡಿಸೆಂಬರ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು.
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಲ್ಲಿ ಒಬ್ಬರಾದ ವಿಜಯ್ ನಾಯರ್ ಎಂಬುವವರು ಸೌತ್ ಗ್ರೂಪ್ ಎಂಬ ಕಂಪನಿಯಿಂದ ಎಎಪಙಇ ನಾಯಕರ ಪರವಾಗಿ ನೂರು ಕೋಟಿ ರೂಪಾಯಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.