

ನವದೆಹಲಿ: ಇಡಿ ಬಂಧನ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ತಮ್ಮ ನಾಯಕಿ ಕವಿತಾ ಅವರಿಗೂ ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಬಿಆರ್‌ಎಸ್ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದೆ.
ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸಿಬಿಐ ಬಂಧನವನ್ನು ಪ್ರಶ್ನಿಸಿರುವ ಬಿಆರ್‌ಎಸ್ ನಾಯಕಿ ಮತ್ತು ಎಂಎಲ್‌ಸಿ ಕವಿತಾ ಅವರ ಜಾಮೀನು ಅರ್ಜಿಯನ್ನು ರೋಸ್ ಅವೆನ್ಯೂ ನ್ಯಾಯಾಲಯವು ಶುಕ್ರವಾರ ವಿಚಾರಣೆ ನಡೆಸಿತು. ಇದೇ ಪ್ರಕರಣದಲ್ಲಿ ಕವಿತಾ ವಿರುದ್ಧ ಸಿಬಿಐ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಿದ್ದು, ಎರಡೂ ಕಡೆಯ ವಕೀಲರ ವಾದ ಆಲಿಸಿದ ಪೀಠ ವಿಚಾರಣೆಯನ್ನು ಮುಂದೂಡಿತು.
ನ್ಯಾಯಾಧೀಶರಾದ ಕಾವೇರಿ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜು.22ಕ್ಕೆ ನಡೆಸುವುದಾಗಿ ತಿಳಿಸಿ ಮುಂದೂಡಿದರು. ಇಡಿ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ(ಜು.12) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.