ಕಾರು ಅಪಘಾತದಲ್ಲಿ ಬಿಆರ್​ಎಸ್ ಶಾಸಕಿ ಲಾಸ್ಯ ನಂದಿತಾ ಸಾವು

ತೆಲಂಗಾಣ: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಲಾಸ್ಯ ಅವರು ತೆಲಂಗಾಣದ ಸಿಕಂದರಾಬಾದ್ ಕ್ಯಾಂಟ್ ಕ್ಷೇತ್ರದ ಶಾಸಕರಾಗಿದ್ದರು. ಸಂಗಾರೆಡ್ಡಿಯ ಅಮೀನ್‌ಪುರ ಮಂಡಲದ ವ್ಯಾಪ್ತಿಯ ಸುಲ್ತಾನ್‌ಪುರ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್) ಬಿಆರ್‌ಎಸ್ ಶಾಸಕರ ಕಾರು ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಮಾರುತಿ ಸುಜುಕಿ ಎಕ್ಸ್‌ಎಲ್6 ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಲಾಸ್ಯ ನಂದಿತಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ … Continue reading ಕಾರು ಅಪಘಾತದಲ್ಲಿ ಬಿಆರ್​ಎಸ್ ಶಾಸಕಿ ಲಾಸ್ಯ ನಂದಿತಾ ಸಾವು