More

    ತೆಲಂಗಾಣ; ಚುನಾವಣೆಯ ಹೊಸ್ತಿಲಲ್ಲೇ ಬಿಆರ್​ಎಸ್​ ತೊರೆದು ಬಿಜೆಪಿ ಸೇರ್ಪಡೆಯಾದ ಹಾಲಿ ಶಾಸಕ

    ಹೈದರಾಬಾದ್: ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮಹತ್ವದ ಬೆಳವಣಿಗೆಯೊಂದರಲ್ಲಿ ಆಡಳಿತರೂಢ ಬಿಆರ್​ಎಸ್​ ಪಕ್ಷದ ಶಾಸಕ ರಾಥೋಡ್​ ಬಾಪು ರಾವ್​ ಬಿಜೆಪಿ ಸೇರಿದ್ದಾರೆ.

    ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಬೋತ್​ ಹಾಗೂ ಯಲ್ಲಾರೆಡ್ಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದಲ್ಲದೆ ತೆಲಂಗಾಣ ರಾಜ್ಯ ಘಟಕದ ಪ್ರಭಾವಿ ಕಾಂಗ್ರೆಸ್​ ನಾಯಕ ಎಂದು ಗುರುತಿಸಿಕೊಂಡಿರುವ ಚಲಮಲ ಕೃಷ್ಣಾ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ಧಾರೆ.

    ಬಾಪು ರಾವ್​ ಹಾಗೂ ಕೃಷ್ಣಾ ರೆಡ್ಡಿ ಪಕ್ಷ ಸೇರ್ಪಡೆಯಿಂದ ಬೋತ್​ ಹಾಗೂ ಮುನುಗೋಡು ಭಾಗದಲ್ಲಿ ಹೆಚ್ಚಿನ ಬಲ ಬಂದಿದ್ದು, ಪಕ್ಷ ಸಂಘಟನೆಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಹೆಚ್ಚು ಸಹಕಾರಿಯಾಗಲಿದೆ. ಬರುವ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ನಿಶ್ಚಿತ ಎಂದು ಕೇಂದ್ರ ಸಚಿವ, ರಾಜ್ಯ ಘಟಕದ ಅಧ್ಯಕ್ಷ ಕಿಶನ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಬೆಕ್ಕಿನಂತೆ ಕಾಣಲು 20 ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

    ಬೋತ್​ ವಿಧಾನಸಭಾ ಕ್ಷೇತ್ರದಿಂದ ಬಾಪು ರಾವ್​ ಹಾಗೂ ಮುನುಗೋಡು ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದ ಚಲಮಲ ಕೃಷ್ಣಾ ರೆಡ್ಡಿ ಟಿಕೆಟ್​ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರ ಸೇರ್ಪಡೆ ಬಿಆರ್​ಎಸ್​ ಹಾಗೂ ಕಾಂಗ್ರೆಸ್​ ಪಕ್ಷಗಳಿಗೆ ದೊಡ್ಡ ಹೊಡೆತ ಎಂದೇ ಪರಿಗಣಿಸಲಾಗಿದೆ.

    ಮುಂದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಗದ್ದುಗೆಗಾಗಿ ಆಡಳಿತರೂಢ ಬಿಆರ್​ಎಸ್​, ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts