Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಪ್ರತಿಪಕ್ಷದಲ್ಲಿರಲು ಜನ ತೀರ್ಪು ನೀಡಿದ್ದಾರೆ; ನಮಗೆ ಆಪರೇಷನ್​ ಕಮಲ ಅಗತ್ಯವಿಲ್ಲ

Wednesday, 08.08.2018, 12:09 PM       No Comments

ಬೆಂಗಳೂರು: ವಿರೋಧ ಪಕ್ಷದಲ್ಲಿರಬೇಕು ಎಂದು ಜನ ತೀರ್ಮಾನಿಸಿದ್ದಾರೆ. ನಾವು ಗೌರವಯುತವಾಗಿ ವಿರೋಧ ಪಕ್ಷದಲ್ಲೇ ಇರುತ್ತೇವೆ. ಹೀಗಾಗಿ ಆಪರೇಷನ್​ ಕಮಲದ ಅಗತ್ಯವೇ ನಮಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​ ಯಡಿಯೂರಪ್ಪ ಅವರು ಹೇಳಿದ್ದಾರೆ.

ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ, ಬಿಜೆಪಿ ನಾಯಕರು 80 ಶಾಸಕರನ್ನು ಸಂಪರ್ಕಿಸಿದ್ದಾರೆ, ಬಿಜೆಪಿಯ ಐವರು ನಾಯಕರು ಇದೇ ಕೆಲಸ ದಲ್ಲಿ ತೊಡಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮತ್ತು ಸಚಿವ ಡಿ.ಕೆ ಶಿವಕುಮಾರ್​ ಅವರ ಹೇಳಿಕೆಗೆ ಬುಧವಾರ ಯಡಿಯೂರಪ್ಪ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್​ ಅವರು ನಮ್ಮ ಪಕ್ಷದ ವಿರುದ್ಧ ಅರ್ಥಹೀನ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಪಕ್ಷದ ಶಾಸಕರನ್ನು ಸೆಳೆಯುವ ಅಗತ್ಯವೇ ನಮಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 80 ಶಾಸಕರನ್ನು ಸಂಪರ್ಕಿಸಿದ್ದಾರೆ ಬಿಜೆಪಿ ಮಂದಿ: ದಿನೇಶ್​ ಗುಂಡೂರಾವ್​ ಆರೋಪ

“ಬಿಜೆಪಿ ಮಂದಿ ಎಲ್ಲ ಶಾಸಕರನ್ನು ಸಂಪರ್ಕ ಮಾಡಿ ಆಮಿಷ ಒಡ್ಡುತ್ತಿದ್ದಾರೆ. ಅನೈತಿಕತೆಯಿಂದ ಸರ್ಕಾರ ರಚನೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲ, ಅನ್ಯ ಮಾರ್ಗದಲ್ಲಿ ಸರ್ಕಾರ ರಚನೆ ಮಾಡುವುದು ಸರಿಯಿಲ್ಲ,” ಎಂದು ಬಿಜೆಪಿ ವಿರುದ್ಧ ದಿನೇಶ್ ಗುಂಡುರಾವ್ ಮಂಗಳವಾರ ಹೇಳಿಕೆ ನೀಡಿದ್ದರು.

ಇದಕ್ಕೂ ಮೊದಲು ಮಾತನಾಡಿದ್ದ ಸಚಿವ ಡಿ.ಕೆ ಶಿವಕುಮಾರ್​, ” ಬಿಜೆಪಿ ನಾಯಕರು ನಮ್ಮ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. ಐವರು ನಾಯಕರು ಇದೇ ಕೆಲಸವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಂದರ್ಭ ಬಂದಾಗ ಇದೆಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದ್ದರು.

Leave a Reply

Your email address will not be published. Required fields are marked *

Back To Top