More

    ಬಿಜೆಪಿಯಿಂದ ಮಾಜಿ ಸಚಿವ ಈಶ್ವರಪ್ಪ ಉಚ್ಚಾಟನೆ; ವಿಜಯೇಂದ್ರ, ಯಡಿಯೂರಪ್ಪ ಹೇಳಿದ್ದಿಷ್ಟು

    ಶಿವಮೊಗ್ಗ: ಪುತ್ರನಿಗೆ ಹಾವೇರಿ ಲೋಕಸಭೆ ಟಿಕೆಟ್​ ಕೈ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಬಂಡೆದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಈಶ್ವರಪ್ಪನವರ ಅಪೇಕ್ಷೆಯೂ ಅದೇ ಆಗಿತ್ತು ಎನ್ನಿಸುತ್ತೆ ಎಂದು ಹೇಳಿದ್ದಾರೆ

    ಬಿಎಸ್​ವೈ ಹೇಳಿದ್ದೇನು?

    ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಶಿಸ್ತು ಸಮಿತಿ ಅವರು ತೆಗೆದುಕೊಂಡಿರುವ ತೀರ್ಮಾನ ಇದು ನಮಗೂ ಇದಕ್ಕೂ ಏನು ಸಂಬಂಧವಿಲ್ಲ. ಬಹುಶಃ ಈಶ್ವರಪ್ಪನವರ ಅಪೇಕ್ಷೆಯೂ ಅದೇ ಆಗಿತ್ತು ಎನ್ನಿಸುತ್ತದೆ. ಇದರ ಬಗ್ಗೆ ನಾನು ಹೆಚ್ಚಾಗಿ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ.

    ಇದನ್ನೂ ಓದಿ: ಟಿ-20 ವಿಶ್ವಕಪ್​; ಎರಡು ತಂಡಗಳಿಗೆ ಕೆಎಂಎಫ್​ ಪ್ರಾಯೋಜಕತ್ವ

    ಲೋಕಸಭೆ ಚುನಾವಣೆ ಸಂಬಂಧ ರಾಜ್ಯದ ಉದ್ದಗಲಕ್ಕೂ ಪ್ರಚಾರ ಮಾಡಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್​ ಪರವಾದ ವಾತಾವರಣ ಇರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಲಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ವಿಜಯೇಂದ್ರ ಹೇಳಿದ್ದೇನು?

    ಈಶ್ವರಪ್ಪನವರ ಉಚ್ಚಾಟನೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಲ್ಲಾ ರಾಜ್ಯಗಳಲ್ಲಿ ಇರುವಂತೆ ನಮ್ಮಲ್ಲೂ ಒಂದು ಶಿಸ್ತು ಸಮಿತಿ ಇದೆ. ಅವರಿಗೆ ಬಹಳ ಸಮಯಾವಕಾಶ ಕೊಟ್ಟರೂ ಸಹ ನಡವಳಿಕೆಯನ್ನು ಬದಲಾಯಿಸಿಕೊಳ್ಳದ ಕಾರಣ ವರಿಷ್ಠರು ಈ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಜನ ಆಶೀರ್ವಾದ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts