ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ದೆಹಲಿಯಿಂದಲೇ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ ಸಿಎಂ ಬಿಎಸ್​ವೈ

1138456
Published on

ನವದೆಹಲಿ: ರಾಜೀನಾಮೆ ಕುರಿತು ಎದ್ದಿರುವ ಊಹಾಪೋಹಗಳ ಕುರಿತು ಸ್ಪಷ್ಟ ಸಂದೇಶ ರವಾನಿಸಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಉಳಿದ ಅವಧಿಯವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ರಾಜೀನಾಮೆ ಎಂಬುದು ಕೇವಲ ಗಾಳಿ ಸುದ್ದಿಯಷ್ಟೇ. ರಾಜೀನಾಮೆ ಕೊಡಿ ಎಂದು ಹೈಕಮಾಂಡ್​ ಕೇಳಿಲ್ಲ. ನಾನು ರಾಜೀನಾಮೆ ನೀಡುತ್ತೇನೆ ಎಂಬುದು ಶುದ್ದ ಸುಳ್ಳು. ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಆಗಮಿಸಿ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಹಿರಿಯ ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಸಿಎಂ ಬಿಎಸ್​ವೈ ಖಡಕ್​ ಸಂದೇಶವನ್ನು ರವಾನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಬಳಿಕ ಪುತ್ರ ವಿಜಯೇಂದ್ರರೊಂದಿಗೆ ಜೆ.ಪಿ. ನಡ್ಡಾ, ಅಮಿತ್ ಷಾ, ರಾಜನಾಥ್ ಭೇಟಿಗೆ ಬಿಎಸ್​ವೈ ಹೊರಟರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net