More

    ‘ನಾನಿನ್ನೂ ಸಕ್ರಿಯ, ರಾಜಕೀಯದಿಂದ ನಿವೃತ್ತಿಯಾಗಿಲ್ಲ’ ಅಂದ್ರು ಮಾಜಿ ಸಿಎಂ ಯಡಿಯೂರಪ್ಪ: ಅವರ ಮುಂದಿನ ಗುರಿ ಏನು?

    ಶಿವಮೊಗ್ಗ: ರಾಜಕೀಯದಿಂದ ನಾನು ನಿವೃತ್ತಿಯಾಗಿಲ್ಲ. ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

    ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು. ನನಗೆ 80 ವರ್ಷ ಆಗಿರುವ ಹಿನ್ನೆಲೆಯಲ್ಲಿ ನಾನು ಈ ನಿರ್ಧಾರ ಮಾಡಿದ್ದೇನೆ. ಮತ್ತೊಬ್ಬರಿಗೆ ಅವಕಾಶ ಸಿಗಬೇಕೆಂಬ ನಿಟ್ಟಿನಲ್ಲಿ ಈ ತೀರ್ಮಾನ ಮಾಡಿದ್ದೇನೆ. ಇದು ಹೊರತುಪಡಿಸಿದರೆ ಬೇರೆನೂ ಕಾರಣವಿಲ್ಲ ಎಂದರು.

    ಇದನ್ನೂ ಓದಿ: ಡ್ಯಾನ್ಸ್ ವೇಳೆಯೇ ವಿದ್ಯಾರ್ಥಿ ಕುಸಿದು ಬಿದ್ದು ಸಾವು; ಪ್ರತಿಭಟನೆಗೂ ಸಾವಿಗೂ ಸಂಬಂಧವಿಲ್ಲ: ಅಜೀಮ್​ ಪ್ರೇಮ್​ಜಿ ವಿವಿ ಸ್ಪಷ್ಟನೆ

    ನಾನು ಚುನಾವಣೆ ನಿಲ್ಲದೇ ಇರಬಹುದು. ಆದರೆ, ನಾನು ಸಕ್ರಿಯ ರಾಜಕಾರಣದಲ್ಲಿದ್ದು, ಪಕ್ಷವನ್ನು ಅಧಿಕಾರದಲ್ಲಿ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮಠಾಧೀಶರು ಚುನಾವಣೆಗೆ ನಿಲ್ಲಬೇಕೆಂದು ನಾನು ಯಾವ ಮಠಾಧೀಶರನ್ನು ಭೇಟಿಯಾಗಿಲ್ಲ. ಮಠಾಧೀಶರನ್ನು ಚುನಾವಣೆಗೆ ನಿಲ್ಲಲು ನಾನು ಯಾರ ಬಳಿಯೂ ಪ್ರಸ್ತಾಪ ಮಾಡಿಲ್ಲ ಎಂದರು.

    ಇದನ್ನೂ ಓದಿ: ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ

    ದೇಶದ ಉತ್ತಮ ವಿಮಾನ ನಿಲ್ದಾಣ ಶಿವಮೊಗ್ಗದಲ್ಲಿ ನಿರ್ಮಾಣವಾಗಿದೆ. 449 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ. ಎಲ್ಲರೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಂತ ರೀತಿಯಲ್ಲಿ ಭಾಗವಹಿಸಿ ಎಂದು ಮನವಿ‌ ಮಾಡಿದರು.

    ಆಸ್ತಿ ಆಸೆಗೆ ಒಂದೇ ಮನೆಯ ನಾಲ್ವರ ಕೊಲೆ; ಮಕ್ಕಳಿಬ್ಬರ ಪ್ರಾಣ ಉಳಿಸಿತೇ ನಿದ್ರೆ-ಆಟ!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts