ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಮಾಯಾವತಿ

Mayawati and modi
Published on

ನವದೆಹಲಿ: ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲದ ಬೆಲೆ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದೆ. ಈ ಬಗ್ಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇಂದು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು, ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತು ಹಿಂದಿಯಲ್ಲಿ ಟ್ವಿಟ್ ಮಾಡಿರುವ ಅವರು, ಇಂಧನ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಏನಾದರೂ ಪರಿಹಾರೋಪಾಯ ಕಂಡು ಹಿಡಿಯಬೇಕು ಎಂದಿದ್ದಾರೆ.

ದೊಡ್ಡ ಮಟ್ಟದ ಬೆಲೆ ಏರಿಕೆಯೂ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ. ಇಂಧನ ದರ ನಿಯಂತ್ರಣದ ಮೇಲೆ ಸರ್ಕಾರ ನಿಯಂತ್ರಣ ಕಳೆದುಕೊಂಡ ಮೇಲೆ ಈ ಸಮಸ್ಯೆ ಉದ್ಭವವಾಗಿದೆ. ಹಾಗಾಗಿ ಕೂಡಲೇ ಕೇಂದ್ರ ಸರ್ಕಾರ ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಇಂಧನ ಬೆಲೆ ಏರಿಕೆ ಕುರಿತು ಕಳವಳ ವ್ಯಕ್ತಪಡಿಸಿದ್ದರು. ಪೆಟ್ರೋಲ್, ಡಿಸೇಲ್ ದರ ಏರಿಕೆ ಬಗ್ಗೆ ಜನರಿಗೆ ಎಷ್ಟೇ ಸತ್ಯಾಂಶಗಳನ್ನು ಹೇಳಿದರೂ ಸದ್ಯ ಅದು ಯಾರಿಗೂ ಮನವರಿಕೆಯಾಗುವುದಿಲ್ಲ. ಆದರೆ, ಇಂಧನ ದರ ಇಷ್ಟು ಪ್ರಮಾಣದಲ್ಲಿ ಏರಿಕೆ ಕಂಡಿರುವುದು ಬೇಸರದ ಸಂಗತಿಯಾಗಿದೆ. ಮುಂದಿನದ ದಿನಗಳಲ್ಲಿ ಬೆಲೆ ಕುಸಿತವೇ ಇದಕ್ಕೆ ಉತ್ತರವಾಗಬೇಕಿದೆ ಎಂದು ಅವರು ಹೇಳಿದ್ದರು.

ಚಿಲ್ಲರೇ ಇಂದನವನ್ನು ಗ್ರಾಹಕರಿಗೆ ಯೋಗ್ಯ ದರದಲ್ಲಿ ನೀಡುವ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚರ್ಚೆ ನಡೆಸಬೇಕಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದ್ದು ರಾಜಸ್ತಾನ್ ಹಾಗೂ ಮುಂಬೈನಲ್ಲಿ ಈಗಾಗಲೇ ರೂಪಾಯಿ 100 ರ ಗಡಿಯನ್ನು ತಲುಪಿದೆ. ಭಾನುವಾರದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ ಪೆಟ್ರೋಲ್ ದರ 93.21 ರೂ ಇದ್ದರೆ, ಡಿಸೇಲ್ ಬೆಲೆ 85.44 ರೂಪಾಯಿಗೆ ಮಾರಾಟವಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net