More

    ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲಿಸುವುದೇ ನನ್ನ ಗುರಿ: ಬಿ.ಎಸ್. ಯಡಿಯೂರಪ್ಪ

    ಬೆಂಗಳೂರು: ಈ ಯಡಿಯೂರಪ್ಪ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಿಸುವುದೇ ನನ್ನ ಗುರಿ ಎಂದು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್​ವೈ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್​ ಸರ್ಕಾರ ರಾಜ್ಯದ ಅಭಿವೃದ್ದಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಈ ಸಂಬಂಧ ಸೆಪ್ಟೆಂಬರ್​ 08ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್​ ಸರ್ಕಾರವೇ ಹೊಣೆ

    ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಪ್ರತಿನಿತ್ಯ ಲೋಡ್​ ಶೆಡ್ಡಿಂಗ್​ ಮಾಡಲಾಗುತ್ತಿದೆ. ಅಭಿವೃದ್ದಿ ಕಾರ್ಯಗಳು ಕುಂಠಿತವಾಗಿದೆ. ಸಿಎಂ-ಡಿಸಿಎಂ ಸೇರಿದಂತೆ ಇಡೀ ಕಾಂಗ್ರೆಸ್​ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬರಗಾಲದಿಂದಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಮಗೆ ಕುಡಿಯೋಕೆ ನೀರು ಇಲ್ಲ ಎಂದರು ರೈತರ ಹಿತಾಸಕ್ತಿ ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಲಾಗುತ್ತಿದೆ.

    BSY

    ಹಿಂದೆ ಮಾಡಿರುವ ಕೆಲಸಗಳಿಗೂ ಸಹ ಗುತ್ತಿಗೆದಾರರ ಬಳಿ ಕಮಿಷನ್​ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್​ ಹಾಕಿಸಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಸೆಪ್ಟೆಂಬರ್​ 08ರಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ಶಾಸಕರು, ಸಂಸದರು ಸೇರಿದಂತೆ ಸುಮಾರು 15-20 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಒಂದು ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಕಾಂಗ್ರೆಸ್​ ಸರ್ಕಾರವೇ ನೇರ ಹೊಣೆ ಎಂದು ಎಚ್ಚರಿಸಿದ್ದಾರೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​; ರಾಮಮಂದಿರದ ಕುರಿತು ಚರ್ಚೆ

    ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ

    ಮುಂಬರುವ ಲೋಕಸಭೆ ಚುನಾವಣೆ ನಿಮಿತ್ತ ನನ್ನ ರಾಜ್ಯ ಪ್ರವಾಸ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಪ್ರಾರಂಭವಾಗುತ್ತದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತದೆ. ಈ ಯಡಿಯೂರಪ್ಪ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದ್ದಾರೆ.

    ಆಪರೇಷನ್​ ಹಸ್ತದ ವಿಚಾರವಾಗಿ ಪ್ರತಿಕ್ರಿಯಿಸಿ ನಮ್ಮ ಪಕ್ಷದ ಶಾಸಕರು ಯಾರೂ ಕಾಂಗ್ರೆಸ್​ಗೆ ಹೋಗುವುದಿಲ್ಲ. ನಾನು ಎಲ್ಲರ ಜೊತೆ ಮಾತನಾಡಿದ್ದೇನೆ. ನಾಳೆ ಅವರೆಲ್ಲರೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಶೀಘ್ರದಲ್ಲೇ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ವಿರೋಧ ಪಕ್ಷದ ನಾಯಕ ಇಲ್ಲಾ ಎಂದ ಮಾತ್ರಕ್ಕೆ ವಿಪಕ್ಷವಾಗಿ ನಾವು ಸುಮ್ಮನೇ ಕುಳಿತುಕೊಂಡಿಲ್ಲ. ಕೆಲಸಗಳು ನಡೆಯುತ್ತಿವೆ ಎಂದು ಮಾಜಿ ಸಿಎಂ ಬಿಎ.ಸ್. ಯಡಿಯೂರಪ್ಪ ಹೇಳಿದ್ದಾರೆ. ​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts