More

    ಬಿಎಸ್‌ವೈ ಜನ್ಮದಿನ ನಿಮಿತ್ತ ಥ್ರೋಬಾಲ್ ಪಂದ್ಯಾವಳಿ

    ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಥ್ರೋಬಾಲ್ ಸಂಸ್ಥೆಯಿಂದ ಫೆ.27ರ ಬೆಳಗ್ಗೆ 10ಕ್ಕೆ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಪೋಷಕ ಸಂತೋಷ್ ಬಳ್ಳೇಕೆರೆ ತಿಳಿಸಿದರು.

    ಬಿ.ಎಸ್.ಯಡಿಯೂರಪ್ಪ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಎಸ್.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ ಭಾಗವಹಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಸಂಜೆ 6.30ಕ್ಕೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಸಿ.ಎಚ್.ಮಾಲತೇಶ್, ಬಿ.ಎಚ್.ನಿರಂಜನಮೂರ್ತಿ ಮುಂತಾದವರು ಭಾಗವಹಿಸುವರು ಎಂದರು.
    ಜಿಲ್ಲಾ ವಾಲಿಬಾಲ್ ಸಂಸ್ಥೆ ಖಜಾಂಚಿ ಕೆ.ಎಸ್.ಶಶಿ ಮಾತನಾಡಿ, ಪಂದ್ಯಾವಳಿಯಲ್ಲಿ ಮಹಿಳೆಯರು ಮತ್ತು ಪುರುಷರ ತಲಾ 15 ತಂಡಗಳು ಭಾಗವಹಿಸಲಿವೆ. ವಿಜೇತ ತಂಡಗಳಿಗೆ ಪ್ರಥಮ 10 ಸಾವಿರ ರೂ., ದ್ವಿತೀಯ 8 ಸಾವಿರ ರೂ., ತೃತೀಯ ಐದು ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಮೂರು ಸಾವಿರ ರೂ. ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
    ಪ್ರಮುಖರಾದ ರಾಮಚಂದ್ರಪ್ಪ ಎಚ್.ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ, ಅಂಬಿಕಾ, ವೀಣಾ ಪ್ರವೀಣ್, ರಾಜೇಶ್ವರಿ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts