More

    ಬಿಎಸ್​ವೈ ಸಚಿವ ಸಂಪುಟ ವಿಸ್ತರಣೆ ಇನ್ನು ಶೀಘ್ರ…

    ಬೆಂಗಳೂರು: ಕರೊನಾ ಸೋಂಕು ತಗುಲಿದ ಕಾರಣಕ್ಕೆ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ ಬಳಿಕ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಕ್ರಿಯವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ. ಇಷ್ಟು ದಿನಗಳವರೆಗೆ ಆಸ್ಪತ್ರೆಯಲ್ಲಿದ್ದರೂ ಕಡತ ವಿಲೇವಾರಿ, ದೂರವಾಣಿ ಮೂಲಕವೇ ಅಧಿಕಾರಿಗಳ ಜತೆಗೆ ಚರ್ಚೆ ನಡೆಸುತ್ತಿದ್ದ ಸಿಎಂ, ನಾಳೆಯಿಂದ ಎಂದಿನಂತೆ ಸಹಜ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

    ಆಸ್ಪತ್ರೆಯಿಂದ ಬಿಡುಗಡೆಯಾದ ವೇಳೆ ಒಂದು ವಾರ ವಿಶ್ರಾಂತಿಯಲ್ಲಿರುವಂತೆ ಅವರಿಗೆ ಡಾಕ್ಟರ್​ ಸೂಚಿಸಿದ್ದರು. ಆದರೆ, 2 ದಿನ ಮನೆಯಲ್ಲಿದ್ದ ಅವರು ಶುಕ್ರವಾರದಿಂದಲೇ ವಿವಿಧ ಸಭೆಗಳಲ್ಲೂ ಪಾಲ್ಗೊಳ್ಳಲಿದ್ದಾರೆ. ಬುಧವಾರ ಮತ್ತು ಗುರುವಾರ ಬೆಂಗಳೂರು ಗಲಭೆ ಸಂಬಂಧ ಅಧಿಕಾರಿಗಳು ಮತ್ತು ಸಚಿವರನ್ನು ಮನೆಗೆ ಕರೆಸಿಕೊಂಡು ಪರಿಸ್ಥಿತಿಯ ಮಾಹಿತಿ ಪಡೆದು ಅವಲೋಕನ ನಡೆಸಿದ್ದರು. ಇದನ್ನೂ ಓದಿ: ನಾಲ್ಕನೇ ದೀರ್ಘಾವಧಿಯ ಪ್ರಧಾನಿ ನಮೋ: ನಾಳೆ ಏಳನೇ ಬಾರಿ ಕೆಂಪುಕೋಟೆಯಿಂದ ಭಾಷಣ

    ಸಿಎಂಗೆ ಕರೊನಾ ತಗುಲಿದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಕೂಡ ಮುಂದೂಡಲ್ಪಟ್ಟಿತ್ತು. ಇನ್ನೆರೆಡು ದಿನಗಳಲ್ಲಿ ಈ ಬಗ್ಗೆಯೂ ಅನೌಪಚಾರಿಕ ಸಭೆಗಳು ನಡೆಯುವ ಸಾಧ್ಯತೆ ಇದೆ. ಬಿಎಸ್​ವೈ ಅವರು ಸಕ್ರಿಯರಾದ ಬೆನ್ನಿಗೆ ಬಿಜೆಪಿ ಪಾಳಯದಲ್ಲಿ ಸಚಿವ ಸಂಪುಟಕ್ಕೆ ಲಾಬಿ ಶುರುವಾಗಿದೆ ಎಂದು ಮೂಲಗಳು ತಿಳಿಸಿವೆ.

    ಶುಕ್ರವಾರ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ 8 ಜಿಲ್ಲೆಗಳ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಮಧ್ಯಾಹ್ನ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ದೂರದರ್ಶನ ಮತ್ತು ಆಕಾಶವಾಣಿ ರೆಕಾರ್ಡಿಂಗ್​ನಲ್ಲಿ ಪಾಲ್ಗೊಳ್ಳುವರು.

    ರಾಜ್ಯದಲ್ಲಿ 2 ಲಕ್ಷ ದಾಟಿದ ಕರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣ ಜಾಸ್ತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts