More

    ವಿವಿಧ ಪರಿಷ್ಕೃತ ಯೋಜನೆ, ಪ್ರಸ್ತಾವನೆಗಳಿಗೆ ಸಚಿವ ಸಂಪುಟದ ಅನುಮೋದನೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹಳಷ್ಟು ಪರಿಷ್ಕೃತ ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ. ಅವುಗಳ ಪೈಕಿ, ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆಯಡಿಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಿಗೆ ಹವಾಮಾನ ಮುನ್ಸೂಚನೆ ಮತ್ತು ಪ್ರಸರಣೆ ಪದ್ಧತಿಯನ್ನು ಅನುಷ್ಠಾನಗೊಳಿಸಲು 26.92 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯೂ ಸೇರಿದೆ.

    ಇದಲ್ಲದೆ, ಸಂಪುಟ ಸಭೆಯ ಪ್ರಮುಖ ತೀರ್ಮಾನಗಳ ವಿವರ ಹೀಗಿವೆ.

    • -ಬಹುಗ್ರಾಮ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮತ್ತು ಇತರೆ 127 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಷ್ಕೃತ ಮೊತ್ತ ರೂ.91.50 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ
    • ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯ ರೂ.109.81 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
    • ಬಾಗಲಕೋಟೆ ಜಿಲ್ಲೆ, ಮುಧೋಳ ತಾಲ್ಲೂಕು, ತಿಮ್ಮಾಪುರದ ರನ್ನನಗರದಲ್ಲಿನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತವನ್ನು 40 ವರ್ಷಗಳ ಅವಧಿಗೆ ಎಲ್.ಆರ್.ಓ.ಟಿ ಆಧಾರದ ಮೇಲೆ ಖಾಸಗಿಯವರಿಗೆ ಗುತ್ತಿಗೆ ನೀಡಲು ಅನುಮತಿ
    • -ಪಶ್ಚಿಮ ವಾಹಿನಿ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಬಿಳಿಯೂರು ಗ್ರಾಮದ ಬಿಳಿಯೂರು ಎಂಬಲ್ಲಿ ಕಿಂಡಿ ಅಣೆಕಟ್ಟು ರಚನೆ ಕಾಮಗಾರಿಯ ರೂ.46.70 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
    • -ಕರ್ನಾಟಕ ಭೂ ಸುಧಾರಣೆಗಳ (ಎರಡನೇ ತಿದ್ದುಪಡಿ) ವಿಧೇಯಕ, 2020 ಕ್ಕೆ ಅನುಮೋದನೆ
    • -ಉಡುಪಿ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿ ಈ ಆಸ್ಪತ್ರೆಯ ಕಟ್ಟಡ, ಸಿಬ್ಬಂದಿ, ವಸತಿ ಗೃಹಗಳು, ಹಾಗೂ ಇತರೆ ಮೂಲಭೂತ ಸೌಲಭ್ಯ ಕಾಮಗಾರಿಗಳನ್ನು 115 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ತೀರ್ಮಾನ.
    • -ಕರ್ನಾಟಕ ರಾಜ್ಯ ನಾಗರಿಕ ಸೇವಾ(ನಡತೆ) ನಿಯಮಗಳು 2020 ಕ್ಕೆ ಅನುಮೋದನೆ.
    • -ಕರ್ನಾಟಕ ನಾಗರಿಕ ಸೇವಾ(ಶೀಘ್ರಲಿಪಿಗಾರರ ಮತ್ತು ಬೆರಳಚ್ಚುಗಾರರ ಹುದ್ದೆಗಳ ನೇಮಕಾತಿ) ತಿದ್ದುಪಡಿ ನಿಯಮ 2020ಕ್ಕೆ ಅನುಮೋದನೆ.
    • -ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮ 2020ಕ್ಕೆ ಅನುಮೋದನೆ.

    ‘ಭಾಗ್ಯಲಕ್ಷ್ಮಿ’ ಇನ್ನು ‘ಸುಕನ್ಯಾ ಸಮೃದ್ಧಿ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts