More

    ತಂದೆ-ಮಗನ ಬಂಡಾಯ ಶಮನಗೊಳಿಸಿದ ಬಿಎಸ್​ವೈ; ಬಳಿಕ ಹೇಳಿದ್ದಿಷ್ಟು

    ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಪ್ರಬಲ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದು, ಬಿಜೆಪಿ ಪಾಲಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದರ ನಡುವೆಯೇ ಹೊಳಲ್ಕೆರೆ ಶಾಸಕ ಚಂದ್ರಪ್ಪ ಪುತ್ರ ರಘುಚಂದನ್​ ಬಂಡಾಯ ಸ್ಪರ್ಧೆ ಮಾಡುವುದಾಗಿ ಘೋಷಿಸಿದ ಬಳಿಕ ಎಚ್ಚೆತ್ತ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಂದೆ-ಮಗನ ಮುನಿಸು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ಧಾರೆ.

    ಚಂದ್ರಪ್ಪ ಹಾಗೂ ಅವರ ಪುತ್ರ ರಘು ಚಂದನ್​ ಅವರೊಂದಿಗೆ ಮಾತುಕತೆ ನಡೆಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಂದೆ-ಮಗನ ಮನವೊಲಿಸಿದ್ದಾರೆ. ಅದರಂತೆ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಕೆಲಸ ಮಾಡಲು ಚಂದ್ರಪ್ಪ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಚಂದನ್ ಒಪ್ಪಿಗೆ ಸೂಚಿಸಿದ್ದಾರೆ. ಈ ಮೂಲಕ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಸ್ವಪಕ್ಷೀಯರ ಬಂಡಾಯದಿಂದ ಸೋಲಿನ ಭೀತಿ ಎದುರಿಸುತ್ತಿದ್ದ ಗೋವಿಂದ ಕಾರಜೋಳ ಅವರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

    M Chandrappa

    ಇದನ್ನೂ ಓದಿ: IPL 2024; ಪ್ಲೇಆಫ್​ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ

    ಬಳಿಕ ಮಾತನಾಡಿದ ಶಾಸಕ ಚಂದ್ರಪ್ಪ, ಯಡಿಯೂರಪ್ಪ ಮತ್ತು ವಿಜಯೇಂದ್ರ ನಮಗೆ ಯಾವತ್ತೂ ಅನ್ಯಾಯ ಮಾಡಿದವರಲ್ಲ. ಹಿರಿಯರಾದ ಯಡಿಯೂರಪ್ಪನವರು ನಮ್ಮ ಬೆಂಬಲಿಗರ ಜತೆ ಮಾತನಾಡಿದರು. ಅವರ ಮಾತಿಗೆ ಗೌರವ, ಮರ್ಯಾದೆ ಕೊಟ್ಟು ನನ್ನ ಮಗ ಪಕ್ಷೇತರನಾಗಿ ಸ್ಪರ್ಧೆ ಮಾಡಲ್ಲ. ನಾವು ಪಕ್ಷದ ಪರ ಕೆಲಸ ಮಾಡುತ್ತೇವೆ. ನಾವು ಬಿಜೆಪಿ ಪರ ಕೆಲಸ ಮಾಡುತ್ತೇವೆ, ಅದು ಅನಿವಾರ್ಯ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಪ್ರಚಾರದಲ್ಲಿ ಭಾಗಿಯಾಗುತ್ತೇವೆ. ಪುತ್ರ ರಘುಚಂದನ್​ಗೆ ಮುಂದೆ ಉತ್ತಮ ಅವಕಾಶ ನೀಡುವ ವಿಶ್ವಾಸ ಇದೆ ಎಂದು ಹೇಳಿದ್ಧಾರೆ.

    ರಘೂಚಂದನ್ ಮಾತನಾಡಿ, ಬಿಜೆಪಿ ಅಭ್ಯರ್ಥಿಗೆ ನಾವು ಬೆಂಬಲ ಕೊಡುವ ತೀರ್ಮಾನ ಮಾಡಿದ್ದೇವೆ. ನರೇಂದ್ರ ಮೋದಿ ಕೈಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಯಡಿಯೂರಪ್ಪ ನಮಗೆ ಗಾಡ್ ಫಾದರ್. ಯಡಿಯೂರಪ್ಪ ನೆರಳಲ್ಲೇ ರಾಜಕೀಯಕ್ಕೆ ಬಂದವರಾಗಿದ್ದೇವೆ. ಯಡಿಯೂರಪ್ಪ ಸಾಹೇಬರನ್ನು ನಂಬಿ ನಾವು ಬಿಜೆಪಿಗೆ ಬಂದಿದ್ದೇವೆ. ಅವರು ತಂದೆ ಸ್ಥಾನದಲ್ಲಿದ್ದಾರೆ, ಅವರ ಮಾತನ್ನು ಕೇಳುತ್ತೇವೆ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts