More

    ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ ಹೊರಟ ಬಿಎಸ್​ವೈ; ಟಿಕೆಟ್ ಆಕಾಂಕ್ಷಿಗಳಿಗೆ ಹೆಚ್ಚಿದ ಟೆನ್ಷನ್!

    ಬೆಂಗಳೂರು: ಈಗಾಗಲೇ ಎಲ್ಲಾ ಪ್ರಕ್ರಿಯೆ ಮುಕ್ತಾಯವಾಗಿದ್ದು ಬಿಜೆಪಿಯಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಬಹುತೇಕ ಅಂತಿಮವಾಗಿದೆ. ಏಪ್ರಿಲ್ 9 ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

    ಇದನ್ನೂ ಓದಿ: ಅಳಿಯನಿಗೆ ಕೈ ತಪ್ಪಿದ ಟಿಕೆಟ್‌; ಕಾಂಗ್ರೆಸ್​ಗೆ ಮಾವ ರಾಜೀನಾಮೆ!

    ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟಿಕೆಟ್ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದಾರೆ. ಚುನಾವಣೆಗೆ ಬಿಜೆಪಿಯಿಂದ ಯಾರು ಸ್ಪರ್ಧೆ ಮಾಡಬೇಕು ಎಂಬುದರ ಬಗ್ಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಬೇಕಿರುವ ಕಾರಣ ಪಕ್ಷದ ಹಿರಿಯ ನಾಯಕರು ಹಾಗೂ ಪ್ರಮುಖರ ಜತೆಗೆ ಚರ್ಚೆ ಮಾಡಬೇಕಿದೆ. ಎಲ್ಲರೊಂದಿಗೆ ದೆಹಲಿಯಲ್ಲಿ ಚರ್ಚೆ ನಡೆಸಿ, ಟಿಕೆಟ್ ಅಂತಿಮಗೊಳಿಸುತ್ತೇವೆ ಎಂದು ಬಿಎಸ್​ವೈ ಹೇಳಿದ್ದಾರೆ.

    ಚುನಾವಣೆಗೆ ಸ್ಪರ್ಧಿಸಲು ಟಿಕೆಟ್​ಗಾಗಿ ಪೈಪೋಟಿ ಇರುವುದು ನಿಜ. ಈಗಾಗಲೇ ಕೆಲವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್​ಗೆ ಕಳುಹಿಸಿದ್ದೇವೆ. ಅಂತಿಮ ಪಟ್ಟಿ ಸಿದ್ಧಗೊಳಿಸಲು ನಾನು ಮತ್ತು ಸಿಎಂ ಬೊಮ್ಮಾಯಿ ದೆಹಲಿಗೆ ಹೋಗುತ್ತಿದ್ದೇವೆ. ಯಾರು ಗೆಲ್ಲುತ್ತಾರೆ ಎನ್ನುವುದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಾರಿ ಸ್ಪಷ್ಟ ಬಹುಮತ ಬರುವುದು ಖಚಿತ ಎಂದು ಬಿಎಸ್​ವೈ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರು | ಚಾಕೊಲೇಟ್ ತಂದು ಕೊಟ್ಟಿಲ್ಲವೆಂದು ಬದುಕು ಅಂತ್ಯಗೊಳಿಸಿದ ವಿವಾಹಿತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts