ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಸರಿಯಾಗಿ ವಾದ ಮಂಡಿಸದೆ ತಪ್ಪು ಮಾಡಿದ ಕಾರಣ ನಮಗೆ ಹಿನ್ನಡೆಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಿಎಸ್ವೈ ಸುಪ್ರೀಂ ಕೋರ್ಟ್ ಆದೇಶ ಬರುವುದಕ್ಕೂ ಮೊದಲೇ ನೀರು ಬಿಡಲಾಗಿದೆ. ಸಿದ್ದರಾಮಯ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿ ತಪ್ಪು ಮಾಡಿದೆ ಎಂದು ಕಿಡಿಕಾರಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದಲ್ಲಿ ಮದ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಸರಿಯಾಗಿ ವಾದ ಮಂಡಿಸದೆ ತಪ್ಪು ಮಾಡಿದ ಕಾರಣ ನಮಗೆ ಹಿನ್ನಡೆಯಾಗಿದೆ.
ಇದನ್ನೂ ಓದಿ: ಕ್ರೀಡೆಗಳಲ್ಲಿ ಸಂಭ್ರಮಿಸಿದ ಗದಗ-ಬೆಟಗೇರಿ ನಗರಸಭೆ ಸ್ವಚ್ಛತಾ ಸಿಬ್ಬಂದಿ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಲಿದ್ದು, ಕರ್ನಾಟಕದಲ್ಲಿ ಕಾವೇರಿಯ ವಸ್ತುಸ್ಥಿತಿ ಅರಿಯಲು ಸಮಿತಿ ಒಂದನ್ನು ರಚಿಸಲು ಮನವಿ ಮಾಡಬೇಕಾಗಿದೆ. ಸಮಿತಿ ನೀಡುವ ವರದಿಯ ಆಧಾರದ ಮೇಲೆ ಪ್ರಾಧಿಕಾರಕ್ಕೆ ನೀರು ಹಂಚಿಕೆ ಕುರಿತು ಆದೇಶ ನೀಡಲು ಮನವಿ ಮಾಡಬೇಕೆಂದು ಆಗ್ರಹಿಸಿದ್ದಾರೆ.
ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿರುವ ಡಿಎಂಕೆ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವುದರಿಂದ ಅಲ್ಲಿನ ಸರ್ಕಾರದೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಇಲ್ಲದಿದ್ದಲ್ಲಿ ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.