ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲ್ಲ: ಯಡಿಯೂರಪ್ಪ

ಬೆಂಗಳೂರು: ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲೆಂದು ದೆಹಲಿಗೆ ತೆರಳುತ್ತಿರುವೆ. ಅಲ್ಲಿಗೆ ಹೋದಾಗ ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಕಾವೇರಿ ನಿವಾಸದ ಬಳಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿಎಸ್​ವೈ, ಚುನಾವಣಾ ದೃಷ್ಟಿಯಿಂದ ನಡೆಯುತ್ತಿರುವ ಈ ಸಭೆಯಲ್ಲಿ ಪಾಲ್ಗೊಂಡಾಗ ವರಿಷ್ಠರೆಲ್ಲರ ಭೇಟಿ ಸಹಜ. ಔಪಚಾರಿಕವಾಗಿ ಮಾತುಕತೆಯಾಗಬಹುದೇ ಹೊರತು ರಾಜ್ಯ ರಾಜಕಾರಣ, ನಮ್ಮ ಪಕ್ಷದ ಬಗ್ಗೆ ಚರ್ಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯಕ್ಕೆ ರಾಜ್ಯ ರಾಜಕಾರಣದ … Continue reading ದೆಹಲಿಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲ್ಲ: ಯಡಿಯೂರಪ್ಪ