More

    ರಾಜಕೀಯ ಹಿತಾಸಕ್ತಿಗಾಗಿ ಕಾಂಗ್ರೆಸ್​ ರಾಜ್ಯದ ಹಿತವನ್ನು ಬಲಿಕೊಟ್ಟಿದೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿ

    ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸುವುದು ಸೂಕ್ತ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

    ನಗರದ ಮೈಸೂರು ಬ್ಯಾಂಕ್​ ವೃತ್ತದಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಿಎಸ್​ವೈ ರಾಜಕೀಯ ಹಿತಾಸಕ್ತಿಗಾಗಿ ರಾಜ್ಯದ ಹಿತವನ್ನು ಕಾಂಗ್ರೆಸ್​ ಸರ್ಕಾರ ಬಲಿ ಕೊಟ್ಟಿದೆ. ಕಾವೇರಿ ವಿಚಾರದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

    ಕೇಂದ್ರ ಸರ್ಕಾರದ ಮಧ್ಯಪ್ರವೇಶಕ್ಕೆ ಸರ್ಕಾರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗಾಗಲೇ ಮಾಜಿ ಸಿಎಂ ಕುಮಾರಸ್ವಾಮಿಯವರು ಕಾವೇರಿ ಬಗ್ಗೆ ದೆಹಲಿಯಲ್ಲಿ ಚರ್ಚೆ ಮಾಡಿದ್ದಾರೆ. ಇದರ ಬಗ್ಗೆ ಎಲ್ಲರಿಗೂ ಮಾಹಿತಿ ಇದೆ, ಎಲ್ಲರು ಪರವಾಗಿ ಇದ್ದಾರೆ ವಿನ: ಯಾರು ಕೂಡ ಇದರ ವಿರೋಧ ಇಲ್ಲ. ಇದಕ್ಕೆ ಒಂದೇ ಮಾರ್ಗ ಮೇಲ್ಮನವಿ ಸಲ್ಲಿಸಬೇಕು. ತಜ್ಞರನ್ನು ಕಳುಹಿಸಿ ಇಲ್ಲಿನ ವಾಸ್ತವ ಸ್ಥಿತಿಯನ್ನು ಅವಲೋಕಿಸಬೇಕು ಎಂದಿದ್ದಾರೆ.

    cauvery Protest

    ಇದನ್ನೂ ಓದಿ: ಜಿ-20 ವಿಶ್ವದ ಅತ್ಯಂತ ಶಕ್ತಿಶಾಲಿ ವೇದಿಕೆಯಾಗಲು ಭಾರತ ಪ್ರಮುಖ ಪಾತ್ರ ವಹಿಸಿದೆ: ಅಮಿತಾಬ್ ಕಾಂತ್

    ಎನ್‍ಡಿಎ ಮೈತ್ರಿಕೂಟಕ್ಕೆ ಜೆಡಿಎಸ್​ ಸೇರ್ಪಡೆಯಿಂದ ರಾಜ್ಯದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. 28 ಲೋಕಸಭಾ ಕ್ಷೇತ್ರ ಗೆಲ್ಲಲು ಇದು ಸಹಕಾರಿಯಾಗುತ್ತದೆ. ಬೆಂಗಳೂರಿಗೆ ಕುಡಿಯುವ ನೀರು ಕೊಡದೆ ಇರುವ ಪರಿಸ್ಥಿತಿ ಇದೆ. ನಾವು ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲ. ಇದರ ಬಗ್ಗೆ ಸುಪ್ರೀಂಕೋರ್ಟ್  ಮನವರಿಕೆ ಮಾಡಿಕೊಡುವ ಎಲ್ಲ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಹೇಳಿದ್ದಾರೆ.

    ಇಂದು ನಾವು ಮೈಸೂರು ಬ್ಯಾಂಕ್​ ವೃತ್ತದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಪ್ರತಿ ವಾರ್ಡ್, ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಜನ ಜಾಗೃತಿ ಆಂದೋಲನ, ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತಮಿಳುನಾಡು ಮೆಚ್ಚಿಸಲು ಕದ್ದು ಮುಚ್ಚಿ ನೀರು ಬಿಡುತ್ತಿರುವುದು ಖಂಡನೀಯ. ಕೂಡಲೇ ನೀರು ಪೂರೈಕೆ ನಿಲ್ಲಿಸಿ, ತಜ್ಞರ ತಂಡವನ್ನು ಕಳುಹಿಸಲು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಬೇಕು.

    ಸರ್ಕಾರದ ವೈಫಲ್ಯ, ರಾಜಕೀಯ ಹಿತಾಸಕ್ತಿಗೆ ರಾಜ್ಯದ ಹಿತವನ್ನು ಬಲಿಕೊಡಲಾಗಿದೆ ಎಂದು ಬಿಎಸ್ ವೈ ಆಕ್ರೋಶ. ಕಾವೇರಿ ಜನರ ಹಿತರಕ್ಷಣೆಗಾಗಿ ಬಿಜೆಪಿ ಬದ್ಶ, ಯಾವುದೇ ರೀತಿ ಹೋರಾಟಕ್ಕೆ ಸಿದ್ಧವೆಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಗುಡುಗಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts