ಡ್ಯಾಮೇಜ್​ ಕಂಟ್ರೋಲ್​ಗೆ ಮುಂದಾದ ಬಿಎಸ್​ವೈ; ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಚರ್ಚೆ

BSY
Published on

ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ತಂತ್ರಗಾರಿಕೆ ಹೆಣೆಯುವುದರಲ್ಲಿ ನಿರತರಾಗಿದ್ದಾರೆ.

ಹೇಗಾದರೂ ಮಾಡಿ ತಮ್ಮ ವಿರೋಧಿಗಳನ್ನು ಕಟ್ಟಿ ಹಾಕಬೇಕು ಎಂಬ ಛಲದಲ್ಲಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ.

ದಿಢೀರ್ ಹುಬ್ಬಳ್ಳಿಗೆ ಆಗಮಿಸಿದ ಬಿಎಸ್​ವೈ

ಇನ್ನು ಮಂಗಳವಾರ ಬೆಳಗ್ಗೆ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದ ಬಿ.ಎಲ್​. ಸಂತೋಷ್​ ಟಿಕೆಟ್ ಸಿಕ್ಕಿಲ್ಲವೆಂದು ಬಂಡಾಯ ಎದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಈ ಬಾರಿ ಚುನಾವಣೆಯಲ್ಲಿ ಸೋಲಿಸುವ ಬಗ್ಗೆ ಚರ್ಚೆ ನಡೆಸಿದ್ದರೂ.

ಇನ್ನು ಈ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಹುಬ್ಬಳ್ಳಿಗೆ ದೌಡಾಯಿಸಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ನಡೆ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು ಮಹತ್ವದ ರಾಜಕೀಯ ಚಟುವಟಿಕೆ ನಡೆಯುವ ನಿರೀಕ್ಷೆ ಇದೆ.

ವೀರಶೈವ-ಲಿಂಗಾಯತರ ಸಭೆ

ಇನ್ನು ಹುಬ್ಬಳ್ಳಿಗೆ ದಿಢೀರ್​ ಎಂದು ಆಗಮಿಸಿರುವ ಮಾಜಿ ಸಿಎಂ ಬಿ.ಎಸ್​. ವೈ ಖಾಸಗಿ ಹೋಟೆಲ್​ನಲ್ಲಿ ತಂಗಿದ್ದು ವೀರಶೈ-ಲಿಂಗಾಯತ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈ ಸಭೆ ತೀವ್ರ ಕುತೂಹಲ ಮೂಡಿಸಿದ್ದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಅವರನ್ನು ಮಣಿಸಲು ಸಮುದಾಯದ ಪ್ರಮುಖರೊಂದಿಗೆ ಮೀಟಿಂಗ್​ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಡ್ಯಾಮೇಜ್​ ಕಂಟ್ರೋಲ್​

ಇನ್ನು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರ್ಪಡೆ ಬೆನ್ನಲ್ಲೇ ಬಿಜೆಪಿಗೆ ಆಗಿರುವ ಡ್ಯಾಮೇಜ್​ ಕಂಟ್ರೋಲ್​ ಮಾಡಲು ಸ್ವತಃ ಬಿ.ಎಸ್​. ಯಡಿಯೂರಪ್ಪನವರೇ ಅಖಾಡಕ್ಕಿಳಿದಿದ್ಧಾರೆ. ಹೀಗಾಗಿ ಹುಬ್ಬಳ್ಳಿಗೆ ದಿಢೀರ್​ ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಅಭ್ಯರ್ಥಿ ಮಹೇಶ್​ ಟೆಂಗಿನಕಾಯಿ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಮುಖಂಡರು ಉಪಸ್ಥಿತರಿದ್ದಾರೆಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net