More

    ಬಿಎಸ್‌ವೈ ಅವರದು ಜಾತಿ ಮೀರಿದ ವ್ಯಕ್ತಿತ್ವ: ಹರತಾಳು ಹಾಲಪ್ಪ

    ಸಾಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
    ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ಮಾ. 5ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸುವ ಶಕ್ತಿ ಸಾಗರ ಸಂಗಮ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
    ಎಸ್.ಬಂಗಾರಪ್ಪ ಮತ್ತು ಬಿ.ಎಸ್.ಯಡಿಯೂರಪ್ಪರಂತಹ ನಾಯಕರಿಗೆ ಜಾತಿಮತ ಇಲ್ಲ. ಅವರನ್ನು ಎಲ್ಲ ಜಾತಿಧರ್ಮದವರು ತಮ್ಮವರು ಎಂದು ಗೌರವಿಸುತ್ತಾರೆ. ಜಾತಿ ಮೀರಿದ ವ್ಯಕ್ತಿತ್ವ ರೂಪಿಸಿಕೊಂಡಿರುವ ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
    ಈಡಿಗ, ಬಿಲ್ಲವ, ದೀವರು, ನಾಮಧಾರಿ ಸೇರಿದಂತೆ 26 ಒಳ ಪಂಗಡಗಳ 40 ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ನಮ್ಮ ಸಮಾಜದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಮನೆಮನೆಗೂ ಯಡಿಯೂರಪ್ಪ ಅವರ ಸನ್ಮಾನ ಕುರಿತ ಕರಪತ್ರ ಮತ್ತು ಆಹ್ವಾನಿತರಿಗೆ ಆಹ್ವಾನಪತ್ರ ವಿತರಿಸಲಾಗುತ್ತದೆ ಎಂದು ತಿಳಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಕೊಡುಗೆ ಅಪಾರ. ಅದರಲ್ಲಿಯೂ ನಮ್ಮ ಜಿಲ್ಲೆಯ ಎಲ್ಲ ಜನಾಂಗಗಳ ಶ್ರೇಯೋಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ ಶ್ರಮಿಸಿದ್ದಾರೆ. ಅವರನ್ನು ಸನ್ಮಾನಿಸುವ ಕಾರ್ಯಕ್ರಮಕ್ಕೆ ಪಕ್ಷಾತೀತ, ಜಾತ್ಯಾತೀತವಾಗಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ರಾಜನಂದಿನಿ ಕಾಗೋಡು, ಗಣೇಶ್ ಪ್ರಸಾದ್, ದೇವೇಂದ್ರಪ್ಪ ಯಲಕುಂದ್ಲಿ, ಮಧುರಾ ಶಿವಾನಂದ್, ಕೆ.ಎಸ್.ಪ್ರಶಾಂತ್, ವಿ.ಮಹೇಶ್, ಕೊಟ್ರಪ್ಪ ನೇದರವಳ್ಳಿ, ಕನ್ನಪ್ಪ ಬೆಳಲಮಕ್ಕಿ, ರಾಜಶೇಖರ ಗಾಳಿಪುರ, ಅರುಣ ಕುಗ್ವೆ, ಕೆ.ಸತೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts