ಅನಧಿಕೃತ ಬಡಾವಣೆಗಳ ವಿರುದ್ಧ ಬುಡಾ ಕಾರ್ಯಚರಣೆ

blank

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಇಲ್ಲಿನ ಮಹಾನಗರ ಪಾಲಿಕೆ ಮತ್ತು ಹೊರ ವಲಯದ ಪ್ರದೇಶಗಳಲ್ಲಿನ ಅನಧಿಕೃತ ಬಡಾವಣೆಗಳನ್ನು ಗುರುವಾರ ತೆರವುಗೊಳಿಸುವ ಮೂಲಕ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
ನಗರದ ಹೊರವಲಯದ ಪೀರನವಾಡಿ ಸುತ್ತಮುತ್ತಲಿನ ಕೃಷಿ ಜಮೀನುಗಳಲ್ಲಿ ನಿರ್ಮಿಸಲಾಗಿದ್ದ ನಾಲ್ಕು ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.ಈ ಬಡಾವಣೆಗಳಿಗೆ ಜಿಲ್ಲಾಧಿಕಾರಿಗಳು ಎನ್‌ಎ ಅನುಮತಿ ನೀಡಿಲ್ಲ. ನಕಲಿ ದಾಖಲೆಗಳನ್ನು ಸಲ್ಲಿಕೆ ಮಾಡಿದ್ದಾರೆ. 100 ರೂ. ಬಾಂಡ್ ಪೇಪರ್ ಆಧಾರದ ಮೇಲೆ ನಿವೇಶನಗಳನ್ನು ಮಾರಾಟ ಮಾಡುತ್ತಿರುವ ಹಿನ್ನೆಲೆ ಬುಡಾ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಗಳ ಚಳಿ ಬಿಡಿಸಿದೆ.
ಈಗಾಗಲೇ ನಗರದ ವಿವಿಧ ಕಡೆ ಎನ್‌ಎ ಮಾಡಿಕೊಳ್ಳದೆ 60ಕ್ಕೂ ಅಧಿಕ ಅಕ್ರಮ ಬಡವಾಣೆಗಳಲ್ಲಿ ನಿವೇಶನಗಳನ್ನು 100 ರೂ. ಬಾಂಡ್ ಪೇಪರ್ ಆಧಾರದ ಮೇಲೆ ಜನರಿಗೆ ಮಾರಾಟ ಮಾಡಿದ್ದಾರೆ. ಈ ಬಡಾವಣೆಗಳಿಗೆ ವಿದ್ಯುತ್, ಕುಡಿಯುವ ನೀರು, ರಸ್ತೆ,ಚರಂಡಿ ಸೇರಿದಂತೆ ಇತರೆ ಸೌಲಭ್ಯಗಳು ಇಲ್ಲ. ನಗರದ ಹೊರ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಬಡಾವಣೆ ನಿರ್ಮಾಣಕ್ಕೆ ಬುಡಾದಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಬುಡಾ ಅಧಿಕಾರಿಗಳು ತಿಳಿಸಿದ್ದಾರೆ.
………..
ಕೋಟ್ಸ್
ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿ ಇತರೆ ಮೂಲಭೂತ ಸೌಲಭ್ಯಗಳನ್ನು ಇಲ್ಲದಿರುವ ಅನಧಿಕೃತ ಬಡಾವಣೆಗಳ ವಿರುದ್ಧ ನಿರಂತರ ಕಾರ್ಯಚರಣೆ ಕೈಗೊಳ್ಳಲಾಗಿದೆ. ಪೀರನವಾಡಿಯಲ್ಲಿ ನಾಲ್ಕು ಬಡಾವಣೆಗಳನ್ನು ತೆರವುಗೊಳಿಸಿ ವಶಪಡಿಸಿಕೊಳ್ಳಲಾಗಿದೆ.
– – ಶಕೀಲ ಅಹ್ಮದ್, ಬುಡಾ ಆಯುಕ್ತ

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…