More

    ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ ಬಂಪರ್​: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರೀ ಮೊತ್ತದ ಅನುದಾನ ಹಂಚಿಕೆ

    ನವದೆಹಲಿ: ಪ್ರಸಕ್ತ 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ರೈಲ್ವೆ ಇಲಾಖೆಗೆ ಬಂಪರ್​ ಕೊಡುಗೆಯನ್ನು ಘೋಷಣೆ ಮಾಡಿದೆ.

    ರೈಲ್ವೆ ಇಲಾಖೆಗೆ ಬರೋಬ್ಬರಿ 2.40 ಲಕ್ಷ ಕೋಟಿ ರೂಪಾಯಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ. 2013-14ನೇ ಸಾಲಿನಲ್ಲಿ ಹಂಚಿಕೆ ಮಾಡಲಾದ ಅನುದಾನಕ್ಕಿಂತ 9 ಪಟ್ಟು ಹೆಚ್ಚು ಅನುದಾನವನ್ನು ಈ ಸಾಲಿನ ಬಜೆಟ್​ನಲ್ಲಿ ಕೇಂದ್ರ ಸರ್ಕಾರ ಮೀಸಲು ಇಟ್ಟಿದೆ.

    ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಅತಿದೊಡ್ಡ ಅನುದಾನ ಹಂಚಿಕೆಯಾಗಿದೆ. ಅಲ್ಲದೆ, ರೈಲ್ವೆ ಇಲಾಖೆಗೆ ಸಾಲ ಸೌಲಭ್ಯವು ಸಹ ಇನ್ನು ಒಂದು ವರ್ಷ ಮುಂದುವರಿಯಲಿದೆ. ಈ ವರ್ಷದ ರೈಲ್ವೆ ಬಜೆಟ್ ಅಪೂರ್ಣ ರೈಲ್ವೆ ಯೋಜನೆಗಳ ಪೂರ್ಣಗೊಳಿಸುವಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ನಿರೀಕ್ಷೆಯಿದೆ.

    100 ನಿರ್ಣಾಯಕ ಸಾರಿಗೆ ಮೂಲಸೌಕರ್ಯ ಯೋಜನೆಗಳಿಗೆ ಇದೇ ಸಂದರ್ಭದಲ್ಲಿ 75,000 ಕೋಟಿ ರೂ.ಗಳನ್ನು ಘೋಷಿಸಿದರು. ಇದು ರೈಲ್ವೆಗಳಿಗೆ ನಿರ್ದಿಷ್ಟವಾಗಿ ಅದರ ಸರಕು ವ್ಯಾಪಾರದೊಂದಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಅಲ್ಲದೆ, ಶೀಘ್ರವೇ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಒತ್ತು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ಅವರು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 10ನೇ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್​ ಅವರು ಮಂಡಿಸುತ್ತಿರುವ 5ನೇ ಬಜೆಟ್​ ಆಗಿದೆ. ಈ ಬಾರಿಯು ಸೂಟ್​ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗುತ್ತಿದೆ. (ಏಜೆನ್ಸೀಸ್​)

    ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಟೆಟ್​ನಲ್ಲಿ ಅನುದಾನ ಘೋಷಣೆ: 5,630 ಕೋಟಿ ರೂ. ಮೀಸಲು

    LIVE| ಕೇಂದ್ರ ಬಜೆಟ್ 2023: ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

    ಪ್ರಸ್ತುತ ಕೇಂದ್ರ ಬಜೆಟ್​ನ​ 7 ಆದ್ಯತೆಗಳನ್ನು ಪಟ್ಟಿ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts