

Budget 2025 : ವಿತ್ತ ಸಚಿವೆಯಾಗಿ 8ನೇ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿಗೆ ಉದ್ಯಮ ಸ್ಥಾಪನೆ ಮಾಡುವ ಮಹಿಳೆಯರಿಗೆ ಅತ್ಯುತ್ತಮ ಕೊಡುಗೆಯನ್ನು ಘೋಷಣೆ ಮಾಡಿದ್ದಾರೆ.
MSMEಗಳಿಗೆ ಸಾಲ ಪ್ರಮಾಣ ಹೆಚ್ಚಳ, ಮಹಿಳೆಯರಿಗೆ ಸಾಲ ಹಾಗೂ ಮೊದಲ ಬಾರಿ ಉದ್ಯಮ ಆರಂಭಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಾಲ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯಕ್ಕೆ (MSME) ಸಾಲ ನೀಡುವ ಪ್ರಮಾಣವನ್ನು ಪ್ರಸ್ತುತ 5 ಕೋಟಿ ರೂಪಾಯಿಗಳಿಂದ 10 ಕೋಟಿ ರೂಪಾಯಿಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
ದೇಶದ ಆದಾಯದಲ್ಲಿ ಎಂಎಸ್ಎಂಇ, ಎರಡನೇ ಎಂಜಿನ್ ಆಗಿದೆ. 5.7 ಕೋಟಿ ಸಂಖ್ಯೆಯ ಎಂಎಸ್ಎಂಇಗಳನ್ನು ಕೇಂದ್ರೀಕರಿಸಿ ಉತ್ಪಾದನೆ ಮತ್ತು ಸೇವೆಗಳನ್ನು ಒಳಗೊಂಡಿದೆ. ಪ್ರಸ್ತುತ, 7.5 ಕೋಟಿ ಜನರಿಗೆ ಉದ್ಯೋಗ ನೀಡುವ ಮತ್ತು ನಮ್ಮ ಉತ್ಪಾದನೆಯ ಶೇ. 36% ಉತ್ಪಾದಿಸುವ 1 ಕೋಟಿಗೂ ಹೆಚ್ಚು ನೋಂದಾಯಿತ ಎಂಎಸ್ಎಂಇಗಳು ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಇರಿಸಿದೆ ಎಂದು ನಿರ್ಮಾಲಾ ಸೀತಾರಾಮನ್ ಹೇಳಿದರು.
ಎಸ್ಸಿ/ಎಸ್ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್ಗಳನ್ನು ನೀಡಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.