More

    16 ರಂದು ಬಜೆಟ್ ಮಂಡನೆಗೆ ಬಿಜೆಪಿ ಆಕ್ಷೇಪ; ದಿನಾಂಕ ಮುಂದೂಡಲು ರಾಜ್ಯಪಾಲರಿಗೆ ಮನವಿ

    ಬೆಂಗಳೂರು:
    ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ೆ.16ರಂದು ಚುನಾವಣೆ ನಡೆಯಲಿದ್ದು ಅಂದೇ ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿರುವ ರಾಜ್ಯ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
    ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ನೇತೃತ್ವದಲ್ಲಿ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದ ನಿಯೋಗ, ಜನವರಿ 23ರಂದು ಚುನಾವಣಾ ದಿನವನ್ನು ನಿಗದಿಪಡಿಸಲಾಗಿದೆ. ಆದರೂ, ಇದನ್ನು ಪರಿಗಣಿಸದೆ ಅಂದೇ ಬಜೆಟ್ ಮಂಡನೆ ಮಾಡಲು ಹೊರಟಿರುವುದು ಸರಿಯಲ್ಲ ಎಂದು ನಿಯೋಗ ಪ್ರತಿಪಾದಿಸಿದೆ.
    ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಚುನಾವಣೆ ದಿನವೇ ಬಜೆಟ್ ಮಂಡನೆ ಮಾಡುವುದು ನ್ಯಾಯಬದ್ಧವಲ್ಲ. ಆದ್ದರಿಂದ ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರಕಾರಕ್ಕೆ ಸ್ಪಷ್ಟ ಸೂಚನೆ ಕೊಡಬೇಕು ಎಂದು ನಿಯೋಗ ಒತ್ತಾಯಿಸಿದೆ.
    ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬಜೆಟ್ ಮಂಡನೆ ದಿನವನ್ನು ಮುಂದೂಡಬೇಕು. ಚುನಾವಣೆ ದಿನವೇ ಬಜೆಟ್ ಮಂಡಿಸದಂತೆ ಸೂಚಿಸಲು ಕೋರಿದ್ದೇವೆ. ರಾಜ್ಯ ಸರ್ಕಾರಕ್ಕೆ ಈ ಕುರಿತು ಸೂಚನೆ ನೀಡುವುದಾಗಿ ರಾಜ್ಯಪಾಲರೂ ತಿಳಿಸಿದ್ದಾರೆ ಎಂದು ಹೇಳಿದರು.
    ಆ ದಿನ ಬಜೆಟ್ ಮಂಡಿಸಿದರೆ ಅದು ಮತದಾನದ ಮೇಲೆ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ
    ಚುನಾವಣಾ ಆಯೋಗಕ್ಕೂ ಮನವಿ ಕೊಡಲಿದ್ದೇವೆ ಎಂದು ಹೇಳಿದರು.
    ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಮಾರ್, ಮಾಜಿ ಸಚಿವರಾದ ಭೈರತಿ ಬಸವರಾಜ್, ಹರತಾಳು ಹಾಲಪ್ಪ, ಮುನಿರತ್ನ, ಯುವಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜ್ ಮತ್ತಿತರರು ನಿಯೋಗದಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts