More

    ಚುನಾವಣೆ ಪ್ರೇರಿತ ಅಲ್ಲ, ಅಭಿವೃದ್ಧಿಪರ ಬಜೆಟ್ : ಪ್ರಹ್ಲಾದ ಜೋಶಿ

    ನವದೆಹಲಿ: ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಬಜೆಟ್‌ ಮುಂಗಡ ಪತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.

    ಇದನ್ನೂ ಓದಿ:ಮದುವೆ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ‘ಅನಿಮಲ್​’ ನಟಿ ತೃಪ್ತಿ ದಿಮ್ರಿ

    ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

    ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ.

    ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಮುಂಗಡ ಪತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣ ಆರಂಭದಲ್ಲಿ ಅವರು ‘ವಿಕಸಿತ ಭಾರತ 2047’ ಎಂಬುದನ್ನು ಪ್ರಸ್ತಾಪಿಸಿದ್ದಾರೆ.

    ವಿಜಯ್ ಜೊತೆ ಮದುವೆ; ರಶ್ಮಿಕಾ ಮಂದಣ್ಣ ಮಾತು ಕೇಳಿದ್ರೆ ಶಾಕ್​ ಆಗ್ತೀರಾ? 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts