More

    ಹಠಾತ್​ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ!

    ಬೆಂಗಳೂರು: ಕೆಲ ತಿಂಗಳುಗಳಿಂದ ದೇಶಾದ್ಯಂತ ಹಠಾತ್​ ಆಗಿ ಹೃದಯ ಸಂಬಂಧಿ ಸಾವುಗಳು ನಡೆಯುತ್ತಿದ್ದು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್​ ಆಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಂತಹ ಸಾವುಗಳು ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದ್ದು ಈ ವಿಚಾರ ಬಜೆಟ್​ನಲ್ಲೂ ಪ್ರಸ್ತಾಪ ಆಗಿದೆ.

    ಕರ್ನಾಟಕ ರತ್ನ ಡಾ| ಪುನೀತ್​ ರಾಜ್‌ಕುಮಾರ್‌ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್​ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

    ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂಆರ್ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸುವ ಬಗ್ಗೆಯೂ ಬಜೆಟ್​ನಲ್ಲಿ ಪ್ರಸ್ತಾಪ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts