More

    ಜುಲೈ 7ರಂದು ಬಜೆಟ್​ ಮಂಡನೆ: ಸಿಎಂ ಸಿದ್ದರಾಮಯ್ಯ

    ದಾವಣಗೆರ: ಜುಲೈ 3ರಂದು ಬಜೆಟ್​ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, 7ರಂದು ಆಯವ್ಯಯ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ದಾವಣಗೆರೆ ಹೆಲಿಪ್ಯಾಡಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಬಜೆಟ್ ಸಿದ್ಧತೆಗಳ ಸಭೆ ಪ್ರಾರಂಭವಾದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರ 3.09 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದರು ಎಂದು ಮಾತನಾಡುವ ವೇಳೆ ಹೇಳಿದ್ದಾರೆ.

    ಗೋ ಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. 1964 ಕಾಯ್ದೆಯಲ್ಲಿ 12 ವರ್ಷ ತುಂಬಿರುವ ಬರಡು ಹಾಗೂ ವ್ಯವಸಾಯಕ್ಕೆ ಉಪಯೋಗವಿಲ್ಲದ ರಾಸುಗಳ ಬಗ್ಗೆ ಹೇಳಲಾಗಿದೆ. ಆಮೇಲೆ ತಿದ್ದುಪಡಿಯಾಗಿದೆ.

    ಜುಲೈ 7ರಂದು ಬಜೆಟ್​ ಮಂಡನೆ: ಸಿಎಂ ಸಿದ್ದರಾಮಯ್ಯ

    ರೈತರಿಗೆ ತೊಂದರೆಯಾಗದಂತೆ ಬೀಜ ಗೊಬ್ಬರಗಳ ಸರಬರಾಜು ಆಗಬೇಕೆಂದು ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳಿಗೆ ವೀಡಿಯೋ ಸಂವಾದದ ಮುಖಾಂತರ ತಿಳಿಸಲಾಗಿದೆ. ಪ್ರವಾಹ ಉಂಟಾದರೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: 200 ಯೂನಿಟ್​ ಕರೆಂಟ್​ ಕೊಡುವ ನೆಪದಲ್ಲಿ ಕಾಂಗ್ರೆಸ್​ ಜನರ ದಾರಿ ತಪ್ಪಿಸುತ್ತಿದೆ: ಸಂಜಯ್​ ಪಾಟೀಲ್​

    ವಿದ್ಯುತ್ ದರ ಏರಿಕೆ

    ವಿದ್ಯುತ್ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿ ದರ ಏರಿಕೆ ಆರ್.ಇ.ಸಿ ನಲ್ಲಿ ಮೊದಲೇ ತೀರ್ಮಾನವಾಗಿದೆ. ಹಿಂದೆಯೇ ಆಗಿದ್ದ ತೀರ್ಮಾನವನ್ನು ಈಗ ಜಾರಿ ಮಾಡಲಾಗಿದೆ ಎಂದು ಉತ್ತರಿಸಿದ್ಧಾರೆ.

    ಇಂದಿರಾ ಕ್ಯಾಂಟೀನ್‍

    ಇಂದಿರಾ ಕ್ಯಾಂಟೀನ್‍ಗಳನ್ನು ಪುನರಾರಂಭಿಸಲು ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ. ಕ್ಯಾಂಟೀನುಗಳ ನೌಕರರಿಗೆ ವೇತನ ದೊರೆತಿಲ್ಲವಾದರೆ ಅಥವಾ ಬಾಕಿ ಇದ್ದರೆ ಅದನ್ನು ಕೊಡಿಸುವ ವ್ಯವಸ್ಥೆ ಮಾಡಲಾಗುವುದು.

    ಕಾಕತಾಳೀಯ

    ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆಚರಣೆಯನ್ನು ಮಾಡಲಾಗಿತ್ತು. ಕಾಕತಾಳೀಯವೆಂಬಂತೆ ಮುಖ್ಯಮಂತ್ರಿಯಾಗಿ ಮೊದಲನೇ ಪ್ರವಾಸ ದಾವಣಗೆರೆ ಜಿಲ್ಲೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ಧಾರೆ.

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts