24.9 C
Bangalore
Wednesday, December 11, 2019

ಪರಿಹಾರದಲ್ಲಿ ಮನೆ ನಿರ್ವಿುಸಿಕೊಳ್ಳಿ

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ವಿಜಯವಾಣಿ ಸುದ್ದಿಜಾಲ ನರಗುಂದ

ನೆರೆಪೀಡಿತ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಹಾನಿಯಾದ ಮನೆಗಳಿಗೆ ಕೊಟ್ಟ ಪರಿಹಾರ ಹಣದಲ್ಲಿ ಮನೆ ಕಟ್ಟಿಕೊಳ್ಳಬೇಕು. ಬಿದ್ದ ಮನೆಗಳನ್ನು ದುರಸ್ತಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ಸಂತ್ರಸ್ತರಿಗೆ ಹೇಳಿದರು.

ಮಲಪ್ರಭಾ ನದಿಯ ನೆರೆ ಹಾವಳಿಗೆ ತುತ್ತಾದ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿದ ಅವರು, ಎಪಿಎಂಸಿಯಲ್ಲಿ ಸಂತ್ರಸ್ತರಿಗೆ ನಿರ್ವಿುಸಿದ ತಾತ್ಕಾಲಿಕ ಶೆಡ್​ಗಳಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.

ಸಂತ್ರಸ್ತರ ಅಹವಾಲು ಆಲಿಸಿದ ಅವರು, ರಾಜ್ಯ ಸರ್ಕಾರ ತಲಾ 10 ಸಾವಿರ ರೂ. ತಾತ್ಕಾಲಿಕ ಪರಿಹಾರ, ಹಾನಿಯಾದ ಎ, ಬಿ ವರ್ಗದ ಮನೆಗಳಿಗೆ ಮೊದಲ ಹಂತವಾಗಿ ತಲಾ 1 ಲಕ್ಷ ರೂ. ವಿತರಣೆ, ಶೆಡ್​ಗಳಲ್ಲಿ ತಾತ್ಕಾಲಿಕ ಮೂಲ ಸೌಲಭ್ಯ, ಮಕ್ಕಳ ವಿದ್ಯಾಭ್ಯಾಸ ಮತ್ತಿತರ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ನೀರು ಪೂರೈಕೆ ಕುರಿತು ಕೇಳಿದಾಗ ಸಂತ್ರಸ್ತರು, ಸದ್ಯಕ್ಕೆ ನೀರು ಪೂರೈಕೆ ಸಮಸ್ಯೆಯಿಲ್ಲ ಎಂದು ಹೇಳಿದರು.

ತೀವ್ರ ಹಾನಿಯಾದ ಮನೆಗಳನ್ನು ನೆಲಸಮಗೊಳಿಸುವ ಅಗತ್ಯವಿಲ್ಲ. ಅವರು ಬೇರೆ ಮನೆ ಕಟ್ಟಲು ಬಯಸಿದಲ್ಲಿ ಅನುದಾನಕ್ಕೆ ಅನುಮತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಮನೆ ನಿರ್ವಣದ ಹಂತ ಅವಲಂಬಿಸಿ ರಾಜೀವ್ ಗಾಂಧಿ ನಿಗಮದಿಂದ ಮುಂದಿನ ಅನುದಾನ ಬಿಡುಗಡೆಯಾಗುತ್ತದೆ. ಸದ್ಯ 45 ಕುಟುಂಬಗಳು ವಾಸಿಸುತ್ತಿರುವ ಮನೆಗಳಿಗೆ ನೀಡಲಾಗುತ್ತಿದ್ದು, ವಸತಿ ಯೋಜನೆಯಡಿ ಅವರಿಗೆ ಮನೆ ನೀಡಲು ಅವಕಾಶ ಕಲ್ಪಿಸಲಾಗುವುದು ಎಂದರು.

ಆರೋಗ್ಯ, ಪರಿಸರ ಸ್ವಚ್ಛತೆಗಾಗಿ ಶೌಚಗೃಹ ಬಳಸಿ. ಉದ್ಯೋಗ ಖಾತ್ರಿ ಯೋಜನೆಯಡಿ ಸಂತ್ರಸ್ತರಿಗೆ ಉದ್ಯೋಗ ನೀಡಬೇಕು. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಬಿಡುಗಡೆ ಮಾಡಿದ ತಲಾ 2000 ರೂ. ಮೊದಲ ಕಂತು ಫಲಾನುಭವಿಗಳ ಖಾತೆಗೆ ಜಮೆ ಆಗಿರುವ ಕುರಿತು ಮಾಹಿತಿ ಪಡೆದರು. ಜಿಪಂ ಸಿಇಒ ಡಾ. ಆನಂದ ಕೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಇತರರಿದ್ದರು.

ವ್ಯವಸ್ಥೆಯಲ್ಲಿ ಸುಧಾರಣೆ: ಗದಗ-ಬೆಟಗೇರಿಗೆ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ (ಡಿಬಿಒಟಿ) ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ಜನರಿಂದ ಮಾಹಿತಿ ಪಡೆದರು. ಆಗ ಅಧಿಕಾರಿಗಳು, ನೀರು ಸರಬರಾಜು ವ್ಯವಸ್ಥೆ ಈಗ ಸುಧಾರಿಸಿದ್ದು, ತಾಂತ್ರಿಕ ಕಾರ್ಯಗಳಿಂದ ಕೆಲವೆಡೆ ವಿಳಂಬವಾಗುತ್ತಿದೆ ಎಂದು ತಿಳಿಸಿದರು. ಗಂಗಿಮಡಿ ವಸತಿ ಸಮುಚ್ಚಯಕ್ಕೆ ಟಿ.ಎಂ. ವಿಜಯಭಾಸ್ಕರ ಅವರು ಭೇಟಿ ನೀಡಿದಾಗ ನಿವಾಸಿಗಳು ಅನಿಯಮಿತವಾಗಿ ನೀರು ಪೂರೈಕೆಯಾಗುತ್ತಿದೆ ಎಂದು ದೂರಿದ್ದರು. ಆಗ ಅವರು, ಸಮರ್ಪಕವಾಗಿ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಪಂ ಸಿಇಒ ಡಾ. ಆನಂದ ಕೆ. ಮಾತನಾಡಿ, ಶುದ್ಧ ನೀರಿನ ಘಟಕಗಳ ದುರಸ್ತಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಆದಷ್ಟು ಬೇಗನೆ ಘಟಕಗಳ ದುರಸ್ತಿ, ನಿರ್ವಹಣೆ ಕುರಿತು ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಒಂದೇ ಸೂರಿನಡಿ ಆಧುನಿಕ ಸೌಲಭ್ಯ: ಬಡವರಿಗೆ ಶೌಚಗೃಹ, ಸ್ನಾನಗೃಹ, ಬಟ್ಟೆ ತೊಳೆಯುವ ಯಂತ್ರ, ಹೇರ್ ಡ್ರೖೆಯರ್ ಮೊದಲಾದ ಆಧುನಿಕ ಸೌಲಭ್ಯಗಳನ್ನು ಒಂದೇ ಸೂರಿನಡಿ ಗೌರವ ಘಟಕದಲ್ಲಿ ಒದಗಿಸಿರುವುದು ಉತ್ತಮ ಸೇವೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹೇಳಿದರು. ಸ್ಥಳೀಯ ರಾಜೀವ್ ಗಾಂಧಿ ನಗರದ ಗೌರವ ಘಟಕದಲ್ಲಿ ಪುರುಷ, ಸ್ತ್ರೀಯರಿಗೆ ಅತ್ಯಂತ ಕಡಿಮೆ ದರದಲ್ಲಿ ಒದಗಿಸುತ್ತಿರುವ ಶುಚಿ, ಶೌಚ ಸೌಲಭ್ಯಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಗೌರವ ಘಟಕದ ವಿದ್ಯುತ್ ಶುಲ್ಕ, ಸಿಬ್ಬಂದಿ ಗೌರವಧನವನ್ನು ಗದಗ-ಬೆಟಗೇರಿ ನಗರಸಭೆ ಪಾವತಿಸುತ್ತಿದೆ. ಸುತ್ತಲಿನ ಸಾಮಾನ್ಯ ಕುಟುಂಬಗಳು ಇಲ್ಲಿನ ಸೌಲಭ್ಯ ಪಡೆಯುತ್ತಿವೆ. ಈ ಕುರಿತು ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಬೇಕು. ಇದರ ನಿರ್ವಹಣೆಗೆ ಯೋಗ್ಯ ಸೇವಾ ಶುಲ್ಕವನ್ನು ನಿಯಮಿತವಾಗಿ ಪಡೆಯಲು ವ್ಯವಸ್ಥೆ ಮಾಡಬೇಕು. ನಿರಂತರ ಶುಚಿತ್ವ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪರಿಹಾರ, ಆಹಾರ ಧಾನ್ಯ ಕಿಟ್ ವಿತರಣೆ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯ ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚು ಕಟ್ಟಾಗಿ ನಿರ್ವಹಿಸಲಾಗಿದೆ. ನರಗುಂದ ತಾಲೂಕಿನಲ್ಲಿ 3986 ಸಂತ್ರಸ್ತರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ, ಆಹಾರ ಧಾನ್ಯದ ಕಿಟ್ ವಿತರಿಸಲಾಗಿದೆ. ಪ್ರವಾಹದಲ್ಲಿ 1798 ಮನೆಗಳಿಗೆ ಹಾನಿಯಾಗಿತ್ತು. ಇದರಲ್ಲಿ ಸಂಪೂರ್ಣ ಮನೆ ಬಿದ್ದ (ಎ ಕೆಟಗರಿಯ) 358 ಕುಟುಂಬಗಳಿಗೆ 3.30 ಕೋಟಿ ರೂ., ಬಿ ಕೆಟಗರಿಯ 596 ಕುಟುಂಬಕ್ಕೆ 5. 54 ಕೋಟಿ ರೂ., ಸಿ ಕೆಟಗರಿಯ 844 ಕುಟುಂಬಗಳಿಗೆ 1 ಕೋಟಿ 66 ಲಕ್ಷದ 50 ಸಾವಿರ ರೂ. ಸೇರಿ 10 ಕೋಟಿ 50 ಲಕ್ಷದ 50 ಸಾವಿರ ರೂ. ಪರಿಹಾರವನ್ನು ಈಗಾಗಲೇ ಮೊದಲ ಕಂತಿನಲ್ಲಿ ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು. ಸಂಪೂರ್ಣ ಮನೆ ಕಳೆದುಕೊಂಡ ಕೊಣ್ಣೂರ ಗ್ರಾಮದ ಸಂತ್ರಸ್ತರಿಗೆ 121 ತಾತ್ಕಾಲಿಕ ಶೆಡ್​ಗಳನ್ನು ನಿರ್ವಿುಸಿ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಗ್ರಾಮದಲ್ಲಿ ಬಾಕಿ ಉಳಿದ 60 ಮನೆಗಳ ಸರ್ವೆ ಕಾರ್ಯ ವಾರದ ಹಿಂದೆ ಪೂರ್ಣಗೊಳಿಸಲಾಗಿದೆ. ಆ ಎಲ್ಲ ಫಲಾನುಭಗಳಿಗೂ ಪರಿಹಾರ ನೀಡಲಾಗುವುದು ಎಂದು ಹೇಳಿದರು.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...