ಸೌಲಭ್ಯಗಳಿಂದ ಕಟ್ಟಿಕೊಳ್ಳಿ ಸ್ವಾವಲಂಬಿ ಜೀವನ

GAN
Published on

ಕುಂದಾಪುರ: ಬೈಂದೂರು ಕ್ಷೇತ್ರ ಸಾಕಷ್ಟು ಗ್ರಾಮೀಣ ಪ್ರದೇಶಗಳನ್ನು ಹೊಂದಿದ್ದು, ಬಹಳ ಮಂದಿ ಸ್ವ ಉದ್ಯೋಗದ ಮೂಲಕ ಉತ್ತಮ, ಗೌರವಯುತ ಜೀವನ ನಡೆಸುತ್ತಿದ್ದಾರೆ. ಜನರು ತಾವು ಪಡೆದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ 2024-25ನೇ ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿ ಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಉಚಿತ ಸರಬರಾಜು ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲ ಕರ್ಮಿಗಳಿಗೆ ಸ್ವ ಉದ್ಯೋಗ ಸಂಬಂಧಿತ ಸುಧಾರಿತ ಉಪಕರಣಗಳನ್ನು ವಿತರಿಸಿ ಮಾತನಾಡಿದರು. ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net