More

    ವೈಜ್ಞಾನಿಕ ಚಿಂತನೆಗಳಿಂದ ಉತ್ತಮ ಭವಿಷ್ಯ ನಿರ್ಮಾಣ

    ರಾಯಚೂರು: ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಕಾರಿ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
    ಸ್ಥಳೀಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸರ್ ಸಿ.ವಿ.ರಾಮನ್ ಸಭಾಂಗಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಭಾರತ ಜ್ಞಾನ ವಿಜ್ಞಾನ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಸಮಾಜದಲ್ಲಿ ಉತ್ತಮ ನಡವಳಿಕೆ, ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಿದೆ. ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮೂಲ ಉದ್ದೇಶ ಜನರಲ್ಲಿ ವಿಜ್ಞಾನದ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ.
    ದೇಶದ ಹೆಸರಾಂತ ವಿಜ್ಞಾನಿ ಸರ್ ಸಿ.ವಿ.ರಾಮನ್ ಮಂಡಿಸಿದ ಬೆಳಕಿನ ಚದುರುವಿಕೆ ಪರಿಣಾಮದ ಸಿದ್ಧಾಂತ ಆಧುನಿಕ ವಿಜ್ಞಾನದ ಹಾದಿಯಲ್ಲಿ ಒಂದು ಮಹತ್ವದ ಘಟನೆಯಾಗಿದೆ. ಅದಕ್ಕಾಗಿ ನೋಬೆಲ್ ಪ್ರಶಸ್ತಿ ದೊರೆತಿದ್ದು, ಅದರ ಸ್ಮರಣಾರ್ಥ ೆ.28ನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
    ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕೇಂದ್ರ ಸಮಿತಿ ಸದಸ್ಯ ಪ್ರೊ.ಸಿ.ಡಿ.ಪಾಟೀಲ್, ವಿಜ್ಞಾನ ಕೇಂದ್ರ ಜಿಲ್ಲೆಯಲ್ಲಿ ಕಳೆದ 24 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಮಕ್ಕಳಿಗೆ, ಶಿಕ್ಷಕರಿಗೆ ಮಾಹಿತಿ ನೀಡುವಂತಹ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
    ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯು ದ್ವಿತೀಯ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಚಂದ್ರಶೇಖರ ಭಂಡಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಅಕಾರಿ ಡಾ.ವೈ.ಬಿ.ವಾಲ್ಮೀಕಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಸಂಚಾಲಕ ಸೈಯದ್ ಹಫೀಜುಲ್ಲಾ, ವಿಜ್ಞಾನ ಕೇಂದ್ರ ಕ್ಯುರೇಟರ್ ಅಜೀತ್‌ಕುಮಾರ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts