More

    ಮತದಾನದಿಂದ ಸದೃಢ ರಾಷ್ಟ್ರ ನಿರ್ಮಾಣ

    ರಾಯಚೂರು: ಮತದಾನದಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯವಾಗಲಿದ್ದು, ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
    ಸ್ಥಳೀಯ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದಿಂದ ಮತದಾನ ಜಾಗೃತಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಮತದಾನ ಸಂವಿಧಾನ ನೀಡದ ಹಕ್ಕಾಗಿದೆ. ಅದನ್ನು ಸಮರ್ಥವಾಗಿ ಉಪಯೋಗಿಸಬೇಕು ಎಂದರು.
    ಜಿಲ್ಲಾಕಾರಿ ಕಚೇರಿ ಆವರಣದಿಂದ ಆರಂಭವಾದ ಜಾಥಾ ಚಂದ್ರವೌಳೇಶ್ವರ ವೃತ್ತ, ಬಿಆರ್‌ಬಿ ವೃತ್ತ, ಐಬಿ ರಸ್ತೆ, ರೈಲು ನಿಲ್ದಾಣ, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಿ ಅಂತ್ಯಗೊಂಡಿತ್ತು. ಇದಕ್ಕೂ ಮೊದಲು ಮತದಾರರ ಪ್ರತಿಜ್ಞಾವಿ ಸ್ವೀಕರಿಸಲಾಯಿತು.
    ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಕಾರಿ ಡಾ.ಬಿ.ವೈ.ವಾಲ್ಮೀಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ, ರಾಯಚೂರು ರೈಡರ್ಸ್‌ನ ಡಾ.ಬಸವರಾಜ, ಡಾ.ಜಯಪ್ರಕಾಶ ಪಾಟೀಲ್, ಡಾ.ಗೋಪಿನಾಥ, ಡಾ.ಸಕಲೇಶ ಪಾಟೀಲ್, ಡಾ.ರಮೇಶ, ಡಾ.ಮಲ್ಲಿಕಾರ್ಜುನ, ಡಾ.ನಾಗರಾಜ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts