More

    ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ – ಮಹಾಂತೇಶ ದೊಡಗೌಡರ

    ನೇಸರಗಿ / ಮಲ್ಲಾಪುರ ಕೆ.ಎನ್.: ದೇಶನೂರ ಗ್ರಾಮದಲ್ಲಿ ಜನರ ಬಹುದಿನದ ಬೇಡಿಕೆಯಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಚನ್ನಮ್ಮ
    ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಹೇಳಿದ್ದಾರೆ.

    ಸಮೀಪದ ದೇಶನೂರ ಗ್ರಾಮದಲ್ಲಿ ಮಂಗಳವಾರ ಸಂಜೆ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಸುಸಜ್ಜಿತ ಆರೋಗ್ಯ ಕೇಂದ್ರ, ಸಿಬ್ಬಂದಿ ವಸತಿಗೃಹ ನಿರ್ಮಾಣಗೊಳ್ಳಲಿದೆ. ಆರೋಗ್ಯ ಕೇಂದ್ರದ ನಿರ್ಮಾಣಕ್ಕೆ 2.31 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ನಂಬಿಕೆ ಉಳಿಸಿಕೊಳ್ಳಬೇಕು ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಸಿದ್ದಣ್ಣವರ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾ ಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾ ಗಿದೆ. ಇದರಿಂದ ದೇಶನೂರ ಸುತ್ತಮುತ್ತಲಿನ ಬಡ ಜನರಿಗೆ ಈ ಆಸ್ಪತ್ರೆ ಅನುಕೂಲವಾಗಲಿದ್ದು, ಕೇಂದ್ರ ನಿರ್ಮಾಣದ ನಂತರ ದೊರಕುವ ಆರೋಗ್ಯ ಕೇಂದ್ರದಿಂದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕಗೌಡ ಪಾಟೀಲ, ತಾಲೂಕು ಪಂಚಾಯಿತಿ ಸದಸ್ಯ ಶ್ರೀಶೈಲ ಕಮತಗಿ, ಆಡಳಿತ ವೈದ್ಯಾಧಿಕಾರಿ ಡಾ. ಎಂ.ವಿ.ಕಿವಡಸಣ್ಣವರ, ವೈದ್ಯಾಧಿಕಾರಿ ಡಾ.ಹೇಮಲತಾ, ಮಲ್ಲಿಕಾರ್ಜುನ ಕೊತ್ತಲ, ಎ.ಎನ್.ಪಾಟೀಲ, ಬಸವಣ್ಣೆಪ್ಪ ಕಮತಗಿ, ಆರೋಗ್ಯ ಇಲಾಖೆ ಎಇಇ ಎಂ.ಜಿ.ಜತ್ತಿ, ಎಸ್.ಎಂ.ಮೂಡಗಲಿ, ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts