More

    ಕಟ್ಟಡ ಕಾರ್ಮಿಕರ ಮೇಲಿನ ದೌರ್ಜನ್ಯ ಸಲ್ಲ

    ಗಂಗಾವತಿ: ಕಟ್ಟಡ ಕಾರ್ಮಿಕರಿಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಗತಿಪರ ಕಟ್ಟಡ ಕಾರ್ಮಿಕ ಸಂಘದ ತಾಲೂಕು ಘಟಕದ ಸದಸ್ಯರು ಸಿಪಿಐ(ಎಂಎಲ್)ಲಿಬರೇಶನ್ ಸಹಯೋಗದಲ್ಲಿ ನಗರದ ಶ್ರೀಕೃಷ್ಣದೇವರಾಯ ವೃತ್ತದ ಬಳಿ ಬುಧವಾರ ಪ್ರತಿಭಟಿಸಿ ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡರಿಗೆ ಮನವಿ ಸಲ್ಲಿಸಿದರು.

    ಇದನ್ನೂ ಓದಿ: 10 ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ: ಸಲಿಂಗಕಾಮಿ ಮದ್ರಸಾ ಶಿಕ್ಷಕ ಅರೆಸ್ಟ್​

    ಸಂಘದ ಜಿಲ್ಲಾಧ್ಯಕ್ಷ ಸಣ್ಣ ಹನುಮಂತಪ್ಪ ಹುಲಿಹೈದರ್ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಕೂಲಿ ಹಣ ಕೇಳಿದ್ದಕ್ಕೆ ಮರಣಾಂತಿಕ ಹಲ್ಲೆ ನಡೆಸಿದ್ದು ಖಂಡನೀಯ. ಇತ್ತೀಚಿಗೆ ಕಾರ್ಮಿಕರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ.

    ರಕ್ಷಣೆಗೆ ಮುಂದಾಗಬೇಕಿದ್ದ ಕಾರ್ಮಿಕ ಇಲಾಖೆ ನಿರ್ಲಕ್ಷೃ ವಹಿಸಿದೆ. ಹಲ್ಲೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವುದರ ಜತೆಗೆ ಹಲ್ಲೆಗೊಳಗಾದ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಬೇಕು. ಇಂತಹ ಪ್ರಕರಣ ಮರುಕಳಿಸದಂತೆ ಕಾರ್ಮಿಕ ಇಲಾಖೆ ಕಾಯ್ದೆ ಬಿಗಿಗೊಳಿಸುವಂತೆ ಒತ್ತಾಯಿಸಿದರು.

    ಲಿಬರೇಶನ್ ಜಿಲ್ಲಾ ಕಾರ್ಯದರ್ಶಿ ವಿಜಯದೊರೈರಾಜು, ಸಂಘದ ತಾಲೂಕು ಪದಾಧಿಕಾರಿಗಳಾದ ಚಾಂದ್ ಪಾಶಾ, ವೀರೇಶ, ಶಶಿಕಲಾ, ಗೌರಮ್ಮ, ಲಕ್ಷ್ಮಮ್ಮ, ಈರಮ್ಮ, ಹನುಮಂತ, ಚೌಡಪ್ಪ, ಅಯ್ಯಪ್ಪ, ಮುದಿಯಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts