ಸುರಕ್ಷತಾ ಕ್ರಮ ಪಾಲಿಸಲು ಕಾರ್ಮಿಕ ಇಲಾಖೆ ಸೂಚನೆ

JAR_3686
Published on




ಮಂಗಳೂರು : ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿರುವುದರಿಂದ ಅನೇಕ ಅವಘಡಗಳು ಸಂಭವಿಸುತ್ತಿದ್ದು, ಜೀವಹಾನಿಯಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಕಟ್ಟಡ ಮತ್ತು ಇತರ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕರಿಗೆ ತೆಗೆದುಕೊಳ್ಳಬೇಕಾದಂತಹ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಕಾರ್ಮಿಕ ಇಲಾಖೆ ಸೂಚಿಸಿದೆ.
ಯಾವುದೇ ಕಟ್ಟಡ ಕಾಮಗಾರಿ ನಿರ್ಮಾಣ ಮಾಡುವ ಮಾಲೀಕರು/ ಗುತ್ತಿಗೆದಾರರು ನಿಯಮಗಳನ್ನು ಪಾಲಿಸದೇ ಇದ್ದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾಮಗಾರಿಯನ್ನು ಸ್ಥಗಿತಗೊಳಿಸಲು ಕಾಯ್ದೆಯ ನಿಯಮ ಜಾರಿಗೊಳಿಸಲಾಗುವುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net