More

  ನಿಂತಿದ್ದ ಎತ್ತಿನ ಗಾಡಿಗೆ ಬೈಕ್ ಡಿಕ್ಕಿ; ಸವಾರ ಸಾವು

  ಸವಣೂರ: ನಿಂತಿದ್ದ ಎತ್ತಿನ ಗಾಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಕೋಣನತಂಬಗಿ-ಕೆಸರಳ್ಳಿ ಗ್ರಾಮದ ನಡುವೆ ಸಂಭವಿಸಿದೆ.
  ತಾಲೂಕಿನ ಸಿದ್ದಾಪುರ ಗ್ರಾಮದ ಫಕ್ಕೀರೇಶ ಮಲ್ಲಪ್ಪ ಹುಂಡಿ ಮೃತ ಬೈಕ್ ಸವಾರ.
  ಈತ ಸಿದ್ದಾಪುರ ಗ್ರಾಮಕ್ಕೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ರಸ್ತೆ ಬದಿ ನಿಲ್ಲಿಸಿದ್ದ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ. ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts