More

    ಕರಾವಳಿ ಕಾವಲು ಪಡೆಯಿಂದ ಬೋಟ್ ವಶ

    ಗಂಗೊಳ್ಳಿ: ಗಂಗೊಳ್ಳಿ ಸಮೀಪ ಸಮುದ್ರದಲ್ಲಿ ಕಾನೂನುಬಾಹಿರವಾಗಿ ಬುಲ್ ಟ್ರಾಲ್ ಮೀನುಗಾರಿಕೆ ನಡೆಸುತ್ತಿದ್ದ ಆಳ ಸಮುದ್ರ ಮೀನುಗಾರಿಕಾ ಬೋಟನ್ನು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸರು ವಶಪಡಿಸಿಕೊಂಡಿದ್ದಾರೆ.
    ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧವಿದ್ದರೂ ಗಂಗೊಳ್ಳಿಯಿಂದ 2-3 ನಾಟಿಕಲ್ ಮೈಲು ದೂರದಲ್ಲಿ ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರು ಮೂಲದ ಬೋಟ್ ಬಗ್ಗೆ ನಾಡದೋಣಿ ಮೀನುಗಾರರು ಕರಾವಳಿ ಕಾವಲು ಪೊಲೀಸ್ ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ತೆರಳಿದ ಕರಾವಳಿ ಕಾವಲು ಪೊಲೀಸ್ ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಮೀನುಗಾರಿಕಾ ಬೋಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಇದರೊಟ್ಟಿಗೆ ಮೀನುಗಾರಿಕೆ ನಡೆಸುತ್ತಿದ್ದ ಇನ್ನೊಂದು ಆಳ ಸಮುದ್ರ ಬೋಟು ತಪ್ಪಿಸಿಕೊಂಡು ಪರಾರಿಯಾಗಿದೆ. ಬೋಟ್‌ನಲ್ಲಿ ಆಂಧ್ರಪ್ರದೇಶ ಮೂಲದ 10 ಮಂದಿ ಮೀನುಗಾರರಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.
    ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದ ಬುಲ್‌ಟ್ರಾಲ್ ಬೋಟ್ ಬಂದರಿಗೆ ಬರುತ್ತಿದ್ದಂತೆ ಭಾರಿ ಪ್ರಮಾಣದಲ್ಲಿ ಮೀನುಗಾರರು ಸೇರಿದ್ದರು.

    ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪ್ರಭಾರ ಇನ್‌ಸ್ಪೆೆಕ್ಟರ್ ಅನಂತಪದ್ಮನಾಭ ಕೆ.ವಿ., ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ್ ಎಸ್., ಮೀನುಗಾರಿಕೆ ಇಲಾಖೆಯ ವಿಶ್ವನಾಥ, ಗೋಪಾಲಕೃಷ್ಣ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ಗಂಗೊಳ್ಳಿ ಪ್ರಾಥಮಿಕ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಉಪಾಧ್ಯಕ್ಷ ಸೂರಜ್ ಖಾರ್ವಿ, ನಾಡದೋಣಿ ಮೀನುಗಾರರ ಸಂಘದ ಸದಸ್ಯರು ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts